ವೀರಾಜಪೇಟೆ: ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ೮೦ನೇ ಸ್ವಾತಂತ್ರೊ÷್ಯÃತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.
ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ.ಫಾ. ಜೇಮ್ಸ್ ಡೊಮನಿಕ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು.
ಬಳಿಕ ಅವರು ಸ್ವಾತಂತ್ರೋತ್ಸವದ ಸಂದೇಶವನ್ನು ನೀಡುತ್ತ ಮಾತನಾಡಿ, ಸ್ವಾತಂತ್ರ‍್ಯ ಹಲವಾರು ಮಹನೀಯರ ತ್ಯಾಗ ಹಾಗೂ ಬಲಿದಾನದ ಸಂಕೇತವಾಗಿದೆ ಎಂದರು.
ನ್ಯಾಯ, ಸ್ವಾತಂತ್ರ÷್ಯ, ಸಮಾನತೆಗಳೆಂಬ ತತ್ವದಡಿಯಲ್ಲಿ ನಮ್ಮ ರಾಷ್ಟç ಇದ್ದು ಇಲ್ಲಿ ವಾಸಿಸುತ್ತಿರುವ ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡಬೇಕಿದೆ. ಆಗಮಾತ್ರ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಲು ಸಾಧ್ಯ ಎಂದು ಹೇಳಿದರು.
ಈ ಸಂದರ್ಭ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಪಥಸಂಚಲ ನಡೆಯಿತು. ಧ್ವಜಾರೋಹಣ ಸಂದರ್ಭ ಸಹಾಯಕ ಗುರುಗಳಾದ ಫಾ. ವಿಲ್ಫೆçಡ್ ಆಂಟೋನಿ, ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸವರಿನ್ ಡಿಸೋಜಾ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯರುಗಳಾದ ಸಿಸ್ಟರ್ ರೋಸಿ, ಸಿಸ್ಟರ್ ವಂದನಾ ಲೋಬೊ ಹಾಜರಿದ್ದರು.
ಈ ಸಂದರ್ಭ ವಿದ್ಯಾಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿಗಳು, ಶಿಕ್ಷಕರು, ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು, ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.