ಕೂಡಿಗೆ, ಆ. ೨೧: ಜಿಲ್ಲೆಯ ಕಾವೇರಿ- ಹಾರಂಗಿ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾದ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಹಾರಂಗಿ ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ತೀರಾ ಕಡಿಮೆಯಾಗಿದೆ.
ಆಗಸ್ಟ್ ಮೊದಲ ವಾರದಲ್ಲಿ ಮಳೆ ಸುರಿದು ಕಾವೇರಿ- ಹಾರಂಗಿ ನದಿಗಳು ತುಂಬಿ ಹರಿಯುತ್ತಿದ್ದವು.
ಆಗಸ್ಟ್ ಎರಡನೇ ವಾರದಲ್ಲಿ ಮಳೆಯ ಪ್ರಮಾಣಕಡಿಮೆಯಾಗಿ ಹಾರಂಗಿ ಜಲಾನಯನ ಪ್ರದೇಶದಲ್ಲಿ ಬಿಸಿಲಿನ ವಾತಾವರಣ ಕಂಡುಬAದು ನದಿಯಲ್ಲಿ ಹರಿಯುವ ನೀರಿನ ಮಟ್ಟ ಕಡಿಮೆಯಾಗಿ ಬೇಸಿಗೆಯ ಸಂದರ್ಭದಲ್ಲಿ ಹರಿಯುವ ಮಾದರಿ ಯಲ್ಲಿ ನೀರನ್ನು ಕಾಣ ಬಹುದಾಗಿದೆ.
ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಗೆ ಒಳ ಹರಿವಿನ ನೀರಿನ ಪ್ರಮಾಣವು ತೀರಾ ಕಡಿಮೆ ಅದ ಹಿನ್ನೆಲೆಯಲ್ಲಿ ಅಣೆಕಟ್ಟೆಯ ನೀರಿನ ಸಮತೋಲನದ ಮುಖೇನ ಅಣೆಕಟ್ಟೆಯ ಭದ್ರತಾ ಹಿತದೃಷ್ಟಿಯಿಂದ ಅಣೆಕಟ್ಟೆಯ ಮುಖ್ಯ ಕ್ರಸ್ಟ್ಗೇಟ್ ಮೂಲಕ ಹರಿಸಲಾಗುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ಇದೀಗ ಕೇವಲ ೫೦೦ ಕ್ಯೂಸೆಕ್ಸ್ ನೀರು ಮಾತ್ರ ವಿದ್ಯುತ್ ಘಟಕದ ಮೂಲಕ ನದಿಗೆ ಹರಿಸಲಾಗುತ್ತಿದೆ.
- ಕೆ.ಕೆ. ನಾಗರಾಜಶೆಟ್ಟಿ