ಚೆಟ್ಟಳ್ಳಿ, ಆ. ೨೧: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯ ವೀರಾಜಪೇಟೆ ಇವರ ಆಶ್ರಯದಲ್ಲಿ ನಶಾ ಮುಕ್ತರಾಗುವ ಪ್ರತಿಜ್ಞಾ ಅಭಿಯಾನವನ್ನು ವೀರಾಜಪೇಟೆಯ ಕಾವೇರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಕೋಮಲ ಅವರು ವಿದ್ಯಾರ್ಥಿಗಳಿಗೆ ನಶಾಮುಕ್ತ ಜೀವನದ ಮಹತ್ವದ ಕುರಿತು ಅರಿವು ಮೂಡಿಸಿದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಸದಸ್ಯರಾದ ಚಂಗಪ್ಪ, ಅಕ್ಕಮ್ಮ, ರಾಷ್ಟಿçÃಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಅನುಪಮ ತಿಮ್ಮಯ್ಯ, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ನಕಿಯಾ ಬಾನು ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ಎಂ.ಪಿ. ದಮಯಂತಿ ವಂದಿಸಿದರು.