ಮಡಿಕೇರಿ: ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಇಂದಿರಾ ಗಾಂಧಿ ವೃತ್ತದಲ್ಲಿ ಆಚರಿಸಲಾಯಿತು.

ಹಿರಿಯ ವರ್ತಕ ಈಶ್ವರ್ ಕುಮಾರ್ (ರಘು)ಅವರು ಧ್ವಜಾರೋಹಣ ನೆರವೇರಿಸಿ ಶುಭ ನುಡಿಗಳನ್ನಾಡಿದರು.

ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ಮೋಂತಿ ಗಣೇಶ್ ಮಾತನಾಡಿ, ಸ್ವಾತಂತ್ರೊö್ಯÃತ್ಸವ ಕೇವಲ ಆಚರಣೆ ಆಗದೆ ಅದನ್ನು ಕಾಪಾಡಿಕೊಳ್ಳುವುದು ನಮ್ಮ ಕಾರ್ಯವಾಗಿದೆ, ದೇಶದ ಪ್ರಗತಿಗೆ ಎಲ್ಲರೂ ಒಟ್ಟಾಗಿ ದುಡಿಯಬೇಕೆಂದು ಕರೆಕೊಟ್ಟರು.

ಜಿಲ್ಲಾ ಉಪಾಧ್ಯಕ್ಷರಾದ ನವೀನ್ ಅಂಬೆಕಲ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜ್ಞಾನದೀಪ ದೈವಜ್ಞ ಮಹಿಳಾ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಂಡರು. ವರ್ತಕರು ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ನಗರ ಅಧ್ಯಕ್ಷ ಸಂತೋಷ್ ಅಣ್ವೇಕರ್ ಸ್ವಾಗತಿಸಿ, ಎಂ ಧನಂಜಯ ವಂದನಾರ್ಪಣೆ ಮಾಡಿದರು.