ವೀರಾಜಪೇಟೆ: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವೀರಾಜಪೇಟೆಯ ಡಾ. ಬಿ. ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ೮೦ನೇ ಸ್ವಾತಂತ್ರ÷್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಿಲಯದ ಮೇಲ್ವಿಚಾರಕರಾದ ಕೆ.ಎಂ. ಸುಮಯ್ಯ ಅವರು ಧ್ವಜಾರೋಹಣ ನೆರವೇರಿಸಿ, ದಿನದ ಮಹತ್ವ ಹಾಗೂ ಸ್ವಾತಂತ್ರ÷್ಯ ಹೋರಾಟಗಾರರ ತ್ಯಾಗ-ಬಲಿದಾನಗಳ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ದಿನಾಚರಣೆಯ ಅಂಗವಾಗಿ ನಿಲಯದ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ತದನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕöÈತಿಕ ಕಾರ್ಯಕ್ರಮಗಳು ಜರುಗಿದವು.

ಈ ಸಂದರ್ಭ ನಿಲಯದ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.