ಮಡಿಕೇರಿ, ಆ. ೨೨: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದಿಂದ ಸಾರ್ವಜನಿಕ ಆರೋಗ್ಯ ಮತ್ತು ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ರಾಜ್ಯದಲ್ಲಿ ಪÀನೀರ್ ಹೆಸರಿನಲ್ಲಿ ಮಾರಾಟವಾಗುವ ಅನಲಾಗ್ / ನಾನ್-ಡೈರಿ ಪನೀರ್ನ ಉತ್ಪಾದನೆ, ಸಂಸ್ಕರಣೆ, ಪ್ಯಾಕಿಂಗ್, ಸಂಗ್ರಹಣೆ, ವಿತರಣೆ, ಸಾಗಣೆ, ಸಗಟು ಹಾಗೂ ಚಿಲ್ಲರೆ ಮಾರಾಟ, ಮಾರಾಟಕ್ಕಾಗಿ ಪ್ರದರ್ಶನ ಮತ್ತು ಪೂರೈಕೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ತಾ. ೧೭ ರಂದು ಸರ್ಕಾರಿ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆಯು ಹೊರಡಿಸಿದ ದಿನಾಂಕದಿAದ ಒಂದು ವರ್ಷದ ಅವಧಿಗೆ ಕರ್ನಾಟಕ ರಾಜ್ಯಾದಾದ್ಯಂತ ಜಾರಿಯಲ್ಲಿರುತ್ತದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ೨೦೦೬ರ ಕಲಂ ೩೦(೨)(ಚಿ), ೧೮ ಮತ್ತು ೨೯ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ೨೦೦೬, ನಿಯಮ ೨೦೧೧ರ ನಿಯಮ ೨.೧.೧೬ರ ಪ್ರಕಾರ ಪನೀರ್ ಎಂಬುದು ಹಾಲಿನಿಂದ ತಯಾರಿಸಲಾದ ಪ್ರಮಾಣಿಕೃತ ಆಹಾರ ಉತ್ಪನ್ನವಾಗಿದೆ. ಪನೀರ್ನಲ್ಲಿ ಹಾಲಿನ ಕೊಬ್ಬು ಪ್ರಮುಖ ಅಂಶವಾಗಿದ್ದು, ಅದರ ಬದಲಿಗೆ ಅಥವಾ ಅದರ ಜೊತೆಗೆ ಸಸ್ಯಜನ್ಯ ಎಣ್ಣೆ, ಸಸ್ಯಜನ್ಯ ಕೊಬ್ಬು ಅಥವಾ ಇತರ ನಾನ್-ಡೈರಿ ಪದಾರ್ಥಗಳನ್ನು ಬಳಸುವುದು ಅನುಮತಿಸಿಲ್ಲ.
ಕರ್ನಾಟಕವು ಹಲವಾರು ಪನೀರ್ ಮಾದರಿಗಳನ್ನು ಪರೀಕ್ಷಿಸಿದ್ದು, ಯಾವುದೇ ಕಲಬೆರಕೆ ಇಲ್ಲ ಎಂದು ಕಂಡುಬAದಿದೆ. ಪನೀರ್ನಲ್ಲಿ ಸಸ್ಯಜನ್ಯ ಎಣ್ಣೆ, ಸಸ್ಯಜನ್ಯ ಕೊಬ್ಬು ಅಥವಾ ಇತರ ಡೈರಿ ಪದಾರ್ಥಗಳೊಂದಿಗೆ ಕಲಬೆರಕೆ ಇಲ್ಲದಿದ್ದರೂ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ಉತ್ಪನ್ನಗಳನ್ನು ಬಳಸಬಾರದು, ಸಂಗ್ರಹಿಸಬಾರದು, ಸರಬರಾಜು ಮಾಡಬಾರದು, ಮಾರಾಟ ಮಾಡಬಾರದು ಅಥವಾ ಸಾಗಿಸಬಾರದು ಎಂಬ ಉದ್ದೇಶದಿಂದ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.
ಹಾಲಿನ ಕೊಬ್ಬು ಅಥವಾ ಹಾಲಿನ ಘನಾಂಶವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಸಸ್ಯಜನ್ಯ ಎಣ್ಣೆ, ಸಸ್ಯಜನ್ಯ ಕೊಬ್ಬು ಅಥವಾ ಇತರ ನಾನ್-ಡೈರಿ ಪದಾರ್ಥಗಳಿಂದ ಬದಲಾಯಿಸಿ ಪನೀರ್ನಂತೆ ತಯಾರಿಸಲಾದ ಉತ್ಪನ್ನವನ್ನು “ಅನಲಾಗ್ / ನಾನ್-ಡೈರಿ ಪನೀರ್" ಎಂದು ಪರಿಗಣಿಸಲಾಗುತ್ತದೆ. ಇಂತಹ ಉತ್ಪನ್ನವನ್ನು "ಪನೀರ್" ಎಂದು ಹೆಸರಿಸಿ, ಮಾರಾಟ ಮಾಡಿ ಅಥವಾ ಗ್ರಾಹಕರಿಗೆ ಪನೀರ್ ಎಂದು ಬಿಂಬಿಸುವAತಿಲ್ಲ.
ಈ ನಿಷೇಧವು ನಿರ್ದಿಷ್ಟ ಗುಣಮಟ್ಟದ ಮಾನದಂಡಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನಿಗದಿಪಡಿಸದ ಮತ್ತು ಪ್ರಮಾಣೀಕರಿಸದ ಡೈರಿ ಅನಲಾಗ್ ಉತ್ಪನ್ನಗಳಿಗೆ ಮಾತ್ರ ಅನ್ವಯಿಸುತ್ತದೆ.
ಈಗಾಗಲೇ ಪ್ರತ್ಯೇಕ ಮಾನದಂಡಗಳನ್ನು ಹೊಂದಿರುವ ಈಡಿozeಟಿ ಆesseಡಿಣ, Pಡಿoಛಿesseಜ ಅheese ಮತ್ತು ಒixeಜ ಈಚಿಣ Sಠಿಡಿeಚಿಜ ಮುಂತಾದ ಪ್ರಮಾಣೀಕೃತ ಆಹಾರ ಉತ್ಪನ್ನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೆ, ಯಾವುದೇ ಆಹಾರ ವ್ಯವಹಾರ ಸಂಸ್ಥೆಯು ಅನಲಾಗ್ / ನಾನ್-ಡೈರಿ ಪನೀರ್ ಅನ್ನು ಯಾವುದೇ ಆಹಾರ ಉತ್ಪನ್ನ ಅಥವಾ ಆಹಾರ ಪದಾರ್ಥದ ತಯಾರಿಕೆಯಲ್ಲಿ ಬಳಸುವುದು, ಸಂಗ್ರಹಿಸುವುದು, ಪೂರೈಸುವುದು ಅಥವಾ ಮಾರಾಟ ಮಾಡುವುದನ್ನು ಸಹ ನಿಷೇಧಿಸಲಾಗಿದೆ.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಈ ಆದೇಶದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಹಾಗೂ ಆಹಾರ ವ್ಯವಹಾರ ನಿರ್ವಾಹಕರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.