ಕುಶಾಲನಗರ, ಆ. ೨೩: ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ಡಿಸೆಂಬರ್ ೨೫ ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆಯಲಿರುವ ಗ್ಲೋಬಲ್ ಆಕ್ಸಿಲೇಟರ್ ವಿಷನ್ ಸಮಿಟ್ ಪ್ರಯುಕ್ತ ಕುಶಾಲನಗರದಲ್ಲಿ ಪ್ರಚಾರ ಕಾಲ್ನಡಿಗೆ ಜಾಥಾ ನಡೆಯಿತು.
ಕುಶಾಲನಗರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್, ಆರ್ಯವೈಶ್ಯ ಮಂಡಳಿ ಮತ್ತು ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ದೇವಸ್ಥಾನದ ಆಶ್ರಯದಲ್ಲಿ ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನದಿಂದ ಹೊರಟು ರಥ ಬೀದಿಯ ಮುಖಾಂತರ ಆಂಜನೇಯ ದೇವಸ್ಥಾನದ ತನಕ ಕಾಲ್ನಡಿಗೆ ಜಾಥಾ ನಡೆಯಿತು.
ಕುಶಾಲನಗರ ಡಿವೈಎಸ್ಪಿಪಿ ಚಂದ್ರಶೇಖರ್ ಜಾಥಾಗೆ ಚಾಲನೆ ನೀಡಿದರು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷರೂ ಹಾಗೂ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ಬಿ.ಆರ್. ನಾಗೇಂದ್ರ ಪ್ರಸಾದ್ ಮಾತನಾಡಿ, ಕರ್ನಾಟಕ ಆರ್ಯವೈಶ್ಯ ಮಹಾಸಭಾ ಸದೃಢ ಯುವ ಭಾರತದ ನಿರ್ಮಾಣಕ್ಕಾಗಿ ಪಣತೊಟ್ಟಿದೆ. ಇದರ ಅಂಗವಾಗಿ ಮುಂಬರುವ ವರ್ಷಗಳಲ್ಲಿ ೫೦೦೦ ಸ್ಟಾರ್ಟ್ ಅಪ್ ಕಂಪನಿಗಳನ್ನು ಪ್ರಾರಂಭಿಸಲು ೫ ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಕಲ್ಪಿಸುವಂತಹ ವೇದಿಕೆಯನ್ನು ಗ್ಲೋಬಲ್ ಆಕ್ಸಿಲೇಟರ್ ವಿಷನ್ ಸಮಿಟ್ ಎಂಬ ಶೀರ್ಷಿಕೆಯಲ್ಲಿ ಒಂದೇ ವೇದಿಕೆಯಲ್ಲಿ ಮಾಹಿತಿ, ತರಬೇತಿ, ಸಲಹೆ ಸಹಕಾರ ನೀಡುವ ಮೂಲಕ ಅವಕಾಶವನ್ನು ಕಲ್ಪಿಸುತ್ತಿದೆ. ಎಂದರು.
ಜಾಥಾದಲ್ಲಿ ಆರ್ಯವೈಶ್ಯ ಮಹಾಸಭಾ ಕೊಡಗು ಜಿಲ್ಲಾಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಮಡಿಕೇರಿಯ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ವಿ.ಎಸ್. ಚಂದ್ರಶೇಖರ್, ಕಾರ್ಯದರ್ಶಿ ಪ್ರವೀಣ್ ಕೆ, ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಬಿ. ಅಮೃತ್ ರಾಜ್, ಆರ್ಯವೈಶ್ಯ ಮಹಿಳಾ ಮಂಡಳಿಯ ಅಧ್ಯಕ್ಷೆ ವಾಣಿ ಮಹೇಶ್, ವಾಸವಿ ಯುವಜನ ಸಂಘದ ಅಧ್ಯಕ್ಷ ವಿ.ಜೆ. ಬಾಲಾಜಿ, ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಅನುಷಾ ಅರ್ಜುನ್, ವಾಸವಿ ದೀಕ್ಷಾ ಸಮಿತಿಯ ಅಧ್ಯಕ್ಷ ಕೆ.ಜೆ. ಚಿನ್ನಸ್ವಾಮಿ, ವಾಸವಿ ಕ್ಲಬ್ ನ ಅಧ್ಯಕ್ಷ ವಿ.ಆರ್. ಮಂಜುನಾಥ್, ಆರ್ಯವೈಶ್ಯ ಮಂಡಳಿಯ ಪದಾಧಿಕಾರಿಗಳಾದ ಪ್ರಶಾಂತ್ ಪಿ.ಎಸ್., ಬಿ.ಎಲ್. ಅಶೋಕ್, ಕೆ.ಜೆ. ಸತೀಶ್, ಬಿ.ಪಿ. ಕೃಷ್ಣಮೂರ್ತಿ, ವೈಶಾಖ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.