ಕೂಡಿಗೆ, ಆ. ೨೨: ಕೂಡಿಗೆ ಹಾರಂಗಿ ನದಿಗೆ ಅಡ್ಡಲಾಗಿರುವ ಸೇತುವೆ ಸಮೀಪದಲ್ಲಿ ಶುಕ್ರವಾರ ರಾತ್ರಿ ಪಾದಚಾರಿಗಳಿಗೆ ಅಪರಿಚಿತ ಕಾರು ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನೋರ್ವ ತೀವ್ರ ಗಾಯಗೊಂಡು ಮೈಸೂರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗಳೂರು ಪೂರ್ಣಚಂದ್ರ ಬಡಾವಣೆಯ ಬಸವಯ್ಯ ಎಂಬವರ ಪುತ್ರ ರವಿ (೩೮) ಮೃತ ದುರ್ದೈವಿ. ರಾಮ ಎಂಬವರ ಪುತ್ರ ರೂಪೇಶ್ (೨೮) ಎಂಬವರಿಗೆ ತಲೆಗೆ ಪೆಟ್ಟುಬಿದ್ದ ಹಿನ್ನೆಲೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸಲಾಗಿದೆ. ಇಬ್ಬರೂ ವಾಕಿಂಗ್ ತೆರಳುತ್ತಿದ್ದ ಸಂದರ್ಭ ಅಪರಿಚಿತ ಕಾರೊಂದು ಇವರಿಬ್ಬರಿಗೂ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಕಾರಿನ ಚಾಲಕ ಪರಾರಿಯಾಗಿದ್ದಾನೆ.
ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಸಂಬAಧಿಕರು ಕಾರು ಹಾಗೂ ಗಾಯಾಳುವಿನ ಸಂಬAಧಿಕರು ಕಾರಿನ ಚಾಲಕನನ್ನು ಬಂಧಿಸಬೇಕೆAದು ಒತ್ತಾಯಿಸಿದರು. ಈ ವೇಳೆ ಆದಷ್ಟು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದರು.
ಅಪಘಾತಪಡಿಸಿದ ಕಾರು ಹೆಬ್ಬಾಲೆಯಲ್ಲಿ ಪತ್ತೆಯಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.