ಮಡಿಕೇರಿ, ಆ.೨೩ : ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಬೆಂಗಳೂರು ಗೌಡ ಸಮಾಜಗಳ ಮುಖಂಡರು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮುದಾಯದ ವಿವಿಧ ಅಹವಾಲು ಹಾಗೂ ಬೇಡಿಕೆಗಳನ್ನು ಸಲ್ಲಿಸಿದರು.

ಗೌಡ ಸಮುದಾಯದ ಅಭ್ಯುದಯಕ್ಕೆ ಸಂಬAಧಿಸಿದ ವಿಚಾರಗಳ ಕುರಿತು ಚರ್ಚಿಸಿ ಅಗತ್ಯ ಅನುದಾನಕ್ಕಾಗಿ ಮನವಿ ಮಾಡಿದರು.

ಮುಖ್ಯಮಂತ್ರಿಗಳು ಹಾಗೂ ವಿವಿಧ ಖಾತೆ ಸಚಿವರನ್ನು ಭೇಟಿಯಾದ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ಅವರು ಕುಶಾಲನಗರ ಸಮಾಜದ ವತಿಯಿಂದ ಸಲ್ಲಿಸಲಾಗಿದ್ದ ರೂ.೩ ಕೋಟಿ ಅನುದಾನದ ಬೇಡಿಕೆಯಲ್ಲಿ ರೂ.೧ ಕೋಟಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಅರೆಭಾಷೆ ಗೌಡ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬAಧಿಸಿದ ಬೇಡಿಕೆಗೂ ಒಲವು ವ್ಯಕ್ತಪಡಿಸಿದ್ದಾರೆ. ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ವಿವಿಧ ಸಚಿವರನ್ನು ಭೇಟಿ ಮಾಡಿದ ನಿಯೋಗವು ಸಮುದಾಯದ ಹಲವಾರು ಬೇಡಿಕೆಗಳನ್ನು ಸಲ್ಲಿಸಿತು ಎಂದರು.