ಮಡಿಕೇರಿ, ಆ. ೨೨: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ದಿಮೆದಾರರನ್ನು ಉತ್ತೇಜಿಸಲು ‘ಉದ್ಯಮಶೀಲತಾ ಕಾರ್ಯಕ್ರಮ’ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸುವ ಉದ್ದೇಶದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ೦೨ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ೦೧ ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗಧಿಪಡಿಸಿದೆ. ೨೦೨೪-೨೫ ನೇ ಸಾಲಿನಲ್ಲಿ ಬಾಕಿ ಉಳಿದಿರುವ ಪರಿಶಿಷ್ಟ ಜಾತಿ ೦೧ ಹಾಗೂ ಪರಿಶಿಷ್ಟ ಪಂಗಡದ ೦೧ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಈ ತರಬೇತಿ ಸಂದರ್ಭದಲ್ಲಿ ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.

ಅರ್ಜಿದಾರರು ಹೊಂದಿರಬೇಕಾದ ಅರ್ಹತೆ: ಅರ್ಜಿದಾರರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು ೨೦ ರಿಂದ ೪೫ ವರ್ಷದೊಳಗಿರಬೇಕು. ಅರ್ಜಿದಾರರು ೧೦ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಲಘು ವಾಹನ ಚಾಲನಾ ಪರವಾನಗಿ ಪಡೆದಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.೨ ಲಕ್ಷ ಮೀರಬಾರದು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.೧.೫೦ ಲಕ್ಷ ಮೀರಬಾರದು. ಅರ್ಜಿದಾರರು ಕೊಡಗು ಜಿಲ್ಲೆಯ ನಿವಾಸಿಯಾಗಿರಬೇಕು. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.

ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು: ಜಿಲ್ಲಾ ಮಟ್ಟದ ಪ್ರವಾಸೋದ್ಯಮ ಕಚೇರಿಯಿಂದ ಅರ್ಜಿ ನಮೂನೆ ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರದೊಂದಿಗೆ ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು. ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ಪ್ರತಿ, ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರದ ಪ್ರತಿ, ಖಾಯಂ ಲಘು ವಾಹನ ಚಾಲನಾ ಪರವಾನಗಿ ಪತ್ರದ ಪ್ರತಿ, ವಿದ್ಯಾರ್ಹತೆಯ ಬಗ್ಗೆ ಕನಿಷ್ಠ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ, ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆ/ನಿಗಮ/ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ ಪ್ರಮಾಣಿಕರಿಸಿ, ರೂ.೫೦ ರ ಬೆಲೆಯ ಛಾಪಾ ಕಾಗದದಲ್ಲಿ ನಮೂನೆ-೩ ರಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು.

ಅರ್ಜಿದಾರನು ಈ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸತಕ್ಕದ್ದು. ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್, ೫ ರವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಯಲ್ಲಿ ಪಡೆಯಬಹುದು.

ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಗಳಲ್ಲಿ ಸೆಪ್ಟೆಂಬರ್ ೫ ರೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ೫೭೧೨೦೧ ದೂರವಾಣಿ ಸಂಖ್ಯೆ: ೦೮೨೭೨-೨೦೦೫೧೯ ಅಥವಾ ಈ-ಮೇಲ್ ಜಜಞoಜಚಿguಣouಡಿism@gmಚಿiಟ.ಛಿom ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.