ಚೆಟ್ಟಳ್ಳಿ, ಆ. ೨೩: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತಮೊಟ್ಟೆಯ ರಾಮ್‌ಜಿ ಸತ್ಪಾಲ್ ಬಡಾವಣೆಯ ನಿವೇಶನ ರಹಿತರ ಹೋರಾಟಕ್ಕೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿತು.

ನಿವೇಶನ ರಹಿತರ ಸಮಸ್ಯೆಗಳನ್ನು ಆಲಿಸಿದ ಚೇತನ್ ಅಹಿಂಸಾ, ಅವರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಸ್ಥಳೀಯ ನಿವೇಶನ ರಹಿತರ ಹೋರಾಟ ಸಮಿತಿಯ ಪದಾಧಿಕಾರಿಗಳು ಹಾಗೂ ಫಲಾನುಭವಿಗಳು ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಚೇತನ್ ಅಹಿಂಸಾ ಅವರ ತಂಡದೊAದಿಗೆ ಹಂಚಿಕೊAಡರು.