ಸೋಮವಾರಪೇಟೆ, ಆ. ೨೪: ಸಮೀಪದ ಬಜೆಗುಂಡಿ ಗ್ರಾಮದ ಖಿಳಾರಿಯ ಮಸೀದಿ ವತಿಯಿಂದ ತಾ. ೨೬ ರಂದು ಬೆಳಿಗ್ಗೆ ೯ ಗಂಟೆಗೆ ಈದ್ ಮಿಲಾದ್ ಹಬ್ಬ ಆಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಸೀದಿ ಕಾರ್ಯದರ್ಶಿ ಮುಸ್ತಾಫ ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿ ಅಧ್ಯಕ್ಷ ಕೆ.ಎ. ಯಾಕೂಬ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ಮಂತರ್ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.