ಸೋಮವಾರಪೇಟೆ, ಆ. ೨೪: ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಹಿನ್ನೆಲೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಇದಕ್ಕೂ ಮುನ್ನ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ.ಎ. ಲಾರೆನ್ಸ್ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ಆಯೋಜಿ ಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರು ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಈ ಸಂದರ್ಭ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಯು. ಕಿರಣ್, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಶೀಲಾ ಡಿಸೋಜಾ, ನಗರ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಮಂಜುಳ ಹರೀಶ್, ಸೈಮನ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಸ್.ಕೆ. ವಿನಿ ಪಕ್ಷದ ಪ್ರಮುಖರಾದ ರುಬೀನಾ, ಶುಭ ಮತ್ತಿತರು ಇದ್ದರು.