ಮಡಿಕೇರಿ, ಆ. ೨೪: ಅಕ್ಟೋಬರ್ ೧೭ ರಂದು ಘಟಿಸಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ ಸಂದರ್ಭ ವಿವಿಧ ಕಾರ್ಯಕ್ರಮಗಳಿಗಾಗಿ ರೂ. ೨ ಕೋಟಿ ಅನುದಾನ ಹಾಗೂ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ರೂ. ೧ ಕೋಟಿಯನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ.
ತಲಕಾವೇರಿಯಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಲಿದ್ದು, ಇದು ಪವಿತ್ರ ಆಚರಣೆಯಾಗಿದೆ. ಇದನ್ನು ವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಹಾಗೂ ವಿವಿಧ ಕಾರ್ಯಕ್ರಮಗಳಿಗಾಗಿ ಕಾವೇರಿ ನೀರಾವರಿ ಅಭಿವೃದ್ಧಿ ನಿಗಮದಿಂದ ರೂ. ೨ ಕೋಟಿ ಅನುದಾನ ನೀಡಲಾಗಿದೆ. ಇದರೊಂದಿಗೆ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ರೂ. ೧ ಕೋಟಿ ಬಿಡುಗಡೆ ಮಾಡಲು ಡಿ.ಕೆ. ಶಿವಕುಮಾರ್ ಸಂಬAಧಪಟ್ಟವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ, ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಪ್ರಸ್ತಾವನೆ ಸಲ್ಲಿಸಿದ ಹಿನ್ನೆಲೆ ಮುಖ್ಯಮಂತ್ರಿಯವರು ತಕ್ಷಣ ಸ್ಪಂದಿಸಿದ್ದಾರೆ. ಕಾವೇರಿ ತೀರ್ಥೋದ್ಭವಕ್ಕೆ ಉತ್ಸವಾಚರಣೆ ಸಂಬAಧ ಮುಜರಾಯಿ ಇಲಾಖೆಯಿಂದ ಪ್ರತ್ಯೇಕವಾಗಿ ರೂ. ೭೫ ಲಕ್ಷ ಬಿಡುಗಡೆಗೊಳ್ಳಲಿರುವುದಾಗಿಯೂ ಪೊನ್ನಣ್ಣ ಅವರು ‘ಶಕ್ತಿ’ಗೆ ಮಾಹಿತಿಯಿತ್ತಿದ್ದಾರೆ.
ಕಳೆದ ಬಾರಿ ಗೋಣಿಕೊಪ್ಪ ದಸರಾ ಉತ್ಸವಕ್ಕೆ ೭೫ ಲಕ್ಷ ರೂ.ಗಳ ಅನುದಾನ ನೀಡಿದ್ದು, ಈ ಬಾರಿ ಹೆಚ್ಚುವರಿಯಾಗಿ ೨೫ ಲಕ್ಷ ರೂ.ಗಳ ಅನುದಾನ ಘೋಷಣೆ ಮಾಡಲಾಗಿದೆ.