ಸೋಮವಾರಪೇಟೆ, ಆ. ೨೪: ಭಾರೀ ಮಳೆಗೆ ತೇವಾಂಶ ಹೆಚ್ಚಾಗಿ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಮ್ಮಿಯಾಲ ಗ್ರಾಮದಲ್ಲಿ ವಾಸದ ಮನೆಯ ಗೋಡೆ ಕುಸಿದು ಬಿದ್ದ ಘಟನೆ ನಡೆದಿದ್ದು, ಹೆಚ್ಚಿನ ಅನಾಹುತ ತಪ್ಪಿದೆ.

ಹಮ್ಮಿಯಾಲ ಗ್ರಾಮದ ಮೊಣ್ಣಂಡ ಸೀತವ್ವ ಮತ್ತು ಶಿವಯ್ಯ ಅವರ ಮನೆಯ ಹಿಂಬದಿಯ ಗೋಡೆಯು ಭಾರೀ ಮಳೆಗೆ ಕುಸಿದಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಇದೀಗ ಮಳೆಯ ನೀರು ಮನೆಯ ಒಳ ಭಾಗಕ್ಕೆ ಬರುತ್ತಿದ್ದು, ಸಂಬAಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಟುಂಬಕ್ಕೆ ಅಗತ್ಯ ಪರಿಹಾರ ಒದಗಿಸಬೇಕೆಂದು ಗ್ರಾಮದ ಪೊನ್ನಪ್ಪ ಒತ್ತಾಯಿಸಿದ್ದಾರೆ.