ಮಡಿಕೇರಿ, ಆ. ೨೪: ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮAಡಲದ ರಚನೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗಮಂಡಲ ವಲಯ ಅರಣ್ಯಾಧಿಕಾರಿ ತ್ಯಾಗರಾಜು ಟಿ.ಎಸ್. ಆಗಮಿಸಿ, ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಪದಕಗಳನ್ನು ಧರಿಸುವ ಮೂಲಕ ಅವರ ಜವಾಬ್ದಾರಿಗಳಿಗೆ ಅಧಿಕೃತ ಚಾಲನೆ ನೀಡಿದರು.
ಶಿಸ್ತು, ಜವಾಬ್ಧಾರಿ ಹಾಗೂ ಉತ್ತಮ ನಾಯಕತ್ವದ ಗುಣಗಳ ಕುರಿತು ಮಾರ್ಗದರ್ಶನ ನೀಡಿದರು. ಶಾಲೆಯ ಅಧ್ಯಕ್ಷ ಟಿ.ಕೆ. ಸುಧೀರ್ ಮಾತನಾಡಿ, ನಾಯಕತ್ವವೆಂದರೆ ಕೇವಲ ಅಧಿಕಾರವಲ್ಲ, ಬದಲಾಗಿ ಶಿಸ್ತು, ಪ್ರಾಮಾಣಿಕತೆ, ಜವಾಬ್ದಾರಿ, ಸೇವಾ ಮನೋಭಾವ ಹಾಗೂ ಇತರರನ್ನು ಗೌರವಿಸುವ ಗುಣಗಳ ಸಮನ್ವಯ ಎಂದು ತಿಳಿಸಿದರು. ವಿದ್ಯಾರ್ಥಿ ನಾಯಕರು ತಮ್ಮ ನಡೆ-ನುಡಿಗಳ ಮೂಲಕ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಮಾರ್ಗದರ್ಶನ ನೀಡಿದರು.
ಶಾಲೆಯ ಕಾರ್ಯದರ್ಶಿ ಬಿ.ಎಸ್. ನಿಂಗಪ್ಪ, ಪ್ರಾಂಶುಪಾಲರಾದ ಸತ್ಯ ಸುಲೋಚನ ಎಸ್.ಎಂ., ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.