ವೀರಾಜಪೇಟೆ, ಆ. ೨೪: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಡAಗಾಲದಲ್ಲಿ ಸಂಭ್ರಮ ಶನಿವಾರ ಅಂಗವಾಗಿ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಹಾಗೂ ಅಂತರ್ಜಾಲದ ಸುರಕ್ಷಿತ ಬಳಕೆ ಕುರಿತು ವಿಶೇಷ ಚಟುವಟಿಕೆ ಆಧಾರಿತ ಕಲಿಕಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕಂಪ್ಯೂಟರ್, ಟಿವಿ ಸೇರಿದಂತೆ ಡಿಜಿಟಲ್ ಸಾಧನಗಳನ್ನು ಬಳಸುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ತಿಳಿಸಿಕೊಡಲಾಯಿತು. ಮುಖ್ಯವಾಗಿ ಅಪರಿಚಿತರಿಗೆ ವೈಯಕ್ತಿಕ ಮಾಹಿತಿ ನೀಡದಿರುವುದು, ಸಂದೇಹಾಸ್ಪದ ಲಿಂಕ್‌ಗಳನ್ನು ತೆರೆಯದಿರುವುದು ಮತ್ತು ಇಂಟರ್‌ನೆಟ್ ಅನ್ನು ಜ್ಞಾನಾರ್ಜನೆಗೆ ಮಾತ್ರ ಸದುಪಯೋಗಪಡಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಜಾಗೃತಿ ಮೂಡಿಸಿದರು.