ಮಡಿಕೇರಿ, ಆ. ೨೪-: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ. ವೀರಾಜಪೇಟೆ/ ಪೊನ್ನಂಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮದಿನಾಚರಣೆ ಪೊನ್ನಂಪೇಟೆ ಸಾಮರ್ಥ್ಯ ಸೌಧದಲ್ಲಿ ಗುರುವಾರ ಜರುಗಿತು.

ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಪೊನ್ನಂಪೇಟೆ ತಹಶೀಲ್ದಾರ್ ಸಿ.ಎಸ್. ಸಂಜನಾ ಅವರು ಚಾಲನೆ ನೀಡಿ, ಡಿ. ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ಡಿ.ದೇವರಾಜ ಅರಸುರವರ ಬಗ್ಗೆ ಉಪನ್ಯಾಸವನ್ನು ಬಿ.ಸಿ.ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಲೋಕೇಶ್ ಅವರು ನೀಡಿದರು. ದೇವರಾಜ ಅರಸು ಅವರ ಸಾಧನೆ ಹಾಗೂ ಅವರ ಸಾಮಾಜಿಕ ಸುಧಾರಣೆಗಳ ಬಗ್ಗೆ ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಬಗರ್ ಹುಕುಂ ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾದ ಎ.ಬಿ.ಅಪ್ಪಣ್ಣ, ವೀರಾಜಪೇಟೆ ಹಾಗೂ ಪೊನ್ನಂಪೇಟೆ ಗ್ಯಾರಂಟಿ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಪ್ರಶಾಂತ್, ಜಾನ್ಸನ್, ವೀರಾಜಪೇಟೆ ತಾ.ಪಂ.ಇ.ಒ. ರಾಜೇಶ್ ಕೆ.ಆರ್., ಉಪ ತಹಶೀಲ್ದಾರ್ ಪ್ರದೀಪ್ ಕುಮಾರ್, ಸಹಾಯಕ ನಿರ್ದೇಶಕರು (ಪಂ.ರಾಜ್) ಎಂ.ಡಿ. ಶ್ರೀನಿವಾಸ್, ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.