ಮಡಿಕೇರಿ, ಆ. ೨೪: ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ೨೦೨೬-೨೭ನೇ ಸಾಲಿನ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ತಾ. ೨೫ (ಇಂದು) ರಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಬೆಳಿಗ್ಗೆ ೧೧ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ, ಸಂಘದ ಗೌರವ ಅಧ್ಯಕ್ಷ ಗಣಪತಿ ಎ. ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಪ. ಪೂ. ಕಾಲೇಜು ಪ್ರಾಂಶುಪಾಲರ ಸಂಘ ಅಧ್ಯಕ್ಷ ಹಾಗೂ ಕೂಡಿಗೆ ಸರ್ಕಾರಿ ಪ. ಪೂ. ಕಾಲೇಜು ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಕ್ತಿ ದಿನಪತ್ರಿಕೆ ಸಂಪಾದಕ ಜಿ. ಚಿದ್ವಿಲಾಸ್ ಆಶಯನುಡಿಯಾಡಲಿದ್ದು, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಪಿ.ಆರ್. ವಿಜಯ್, ಖಜಾಂಚಿ ಎಂ.ಎA. ಸೋಮಯ್ಯ, ನಿಕಟಪೂರ್ವ ಅಧ್ಯಕ್ಷೆ ದೇವಕಿ ಭಾಗವಹಿಸಲಿದ್ದಾರೆ.