ನಾಪೋಕ್ಲು, ಆ. ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರ ವತಿಯಿಂದ ಬೆಟ್ಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಒಕ್ಕೂಟದ ಅಧ್ಯಕ್ಷ ಹರೀಶ್, ಜಂಟಿ ಕಾರ್ಯದರ್ಶಿ ಯಶೋಧ, ಶಿಕ್ಷಕಿ ಕಾವೇರಮ್ಮ, ಸೇವಾಪ್ರತಿನಿಧಿ ಗೌರಮ್ಮ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.