ಮಡಿಕೇರಿ ಆ.೨೫: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಹಾಗೂ ಗಾಳಿಯ ಹಿನ್ನೆಲೆಯಲ್ಲಿ ಮರಗಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ತಾ. ೩೧ ರ ವರೆಗೆ ವಿಸ್ತರಿಸಲಾಗಿದೆ.
ತಾ. ೧೭ ರವರೆಗೆ ಮರಗಳು ಹಾಗೂ ಮರದ ದಿಮ್ಮಿಗಳ ಸಾಗಾಣಿಕೆ ಮತ್ತು ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಪ್ರಸ್ತುತ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಭಾರಿ ಗಾಳಿ ಹಾಗೂ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಾಜ್ಞೆಯನ್ನು ತಾ. ೩೧ ರವರೆಗೆ ವಿಸ್ತರಿಸಿದೆ. ಉಳಿದಂತೆ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.