ಮಡಿಕೇರಿ, ಆ. ೨೫: ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಗೊಳಿಸುತ್ತಿರುವ ಪರಿಶಿಷ್ಟ ಜಾತಿಯ ವಿವಿಧ ಅಭಿವೃದ್ಧಿ ಯೋಜನೆಯಡಿ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ದೌರ್ಜನ್ಯ ತಡೆ ಅಧಿನಿಯಮ ಮತ್ತು ಪಿಸಿಆರ್ ಕಾಯ್ದೆಯ ಸಮ್ಮೇಳನ ನಡೆಸಿ ಅರಿವು ಮೂಡಿಸುವ ಸಲುವಾಗಿ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ನಡೆಸಲು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಸ್ವಯಂ ಸೇವಾ ಸಂಸ್ಥೆಗಳು/ ಸಂಘಗಳ ಸಹಭಾಗಿತ್ವ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲು ಸ್ವಯಂ ಸೇವಾ ಸಂಸ್ಥೆಗಳಿAದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಸೇವಾ ಸಂಸ್ಥೆಗಳಿಗೆ ಇರಬೇಕಾದ ಅರ್ಹತೆಗಳು: ಸ್ವಯಂಸೇವಾ ಸಂಸ್ಥೆಯು ನೋಂದಣಿಗೊAಡಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು. ಸ್ವಯಂ ಸೇವಾ ಸಂಸ್ಥೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ದಿಗಾಗಿ ಕನಿಷ್ಟ ೫ ವರ್ಷ ಸೇವೆ ಸಲ್ಲಿಸಿರಬೇಕು. ಪರಿಶಿಷ್ಟ ಜಾತಿ/ಜನಾಂಗದವರ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘಗಳು. ಸಂಸ್ಥೆ/ಸAಘ ಪ್ರತಿ ವರ್ಷ ಆಡಿಟ್ ಮಾಡಿಸಿರಬೇಕು. ಸಂಸ್ಥೆ/ಸAಘವು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವ ಅನುಭವ ಹೊಂದಿರತಕ್ಕದ್ದು.

ಸಲ್ಲಿಸಬೇಕಾದ ದಾಖಲೆಗಳು: ಸಂಘ/ಸAಸ್ಥೆಯ ನೋಂದಣಿ ಪ್ರಮಾಣ ಪತ್ರ, ನವೀಕರಣ ಪ್ರಮಾಣ ಪತ್ರ. ಮೂರು ವರ್ಷದ ಆಡಿಟ್ ರಿಪೋರ್ಟ್ ಸಂಘ/ಸAಸ್ಥೆಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ಕನಿಷ್ಟ ೫ ವರ್ಷ ಸೇವೆ ಸಲ್ಲಿಸಿರುವ ಬಗ್ಗೆ ದೃಢೀಕೃತ ದಾಖಲೆ. ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ದಾಖಲೆಗಳು, ಛಾಯಚಿತ್ರ, ಪತ್ರಿಕಾ ವರದಿ. ಸಂಸ್ಥೆಯು ದೌರ್ಜನ್ಯ ಪ್ರತಿಬಂಧ ಅಧಿನಿಯಮ ೧೯೮೯ರ ಅನುಷ್ಠಾನ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬಗ್ಗೆ ದಾಖಲೆಗಳು, ಪ್ರಕಟಣೆಗಳು, ಕರಪತ್ರ, ಭಿತ್ತಿಪತ್ರ ಮತ್ತಿತರವನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೯೪೮೦೮೪೩೦೩೭ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.