ಮಡಿಕೇರಿ, ಆ. ೨೫: ಕೊಡಗು ಜಿಲ್ಲೆಯಲ್ಲಿ ಡಾ. ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ಸಾಧಕ-ಬಾಧಕಗಳ ಕುರಿತು ಸಮಗ್ರ ಚರ್ಚೆ ನಡೆಸಲು ಜಿಲ್ಲೆಯ ಹಾಲಿ ಹಾಗೂ ಮಾಜಿ ಪ್ರಮುಖ ಜನಪ್ರತಿನಿಧಿಗಳ ವಿಶೇಷ ಸಮಾಲೋಚನಾ ಸಭೆ ಆಯೋಜಿಸಲಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬAಧಿಸಿದAತೆ ಕಸ್ತೂರಿ ರಂಗನ್ ವರದಿಯ ಶಿಫಾರಸುಗಳನ್ನು ಜಾರಿಗೊಳಿಸುವುದರಿಂದ ಕೊಡಗಿನ ಭೌಗೋಳಿಕ ಪರಿಸ್ಥಿತಿ, ಕೃಷಿ, ಪರಿಸರ ಹಾಗೂ ಸಾರ್ವಜನಿಕರ ದೈನಂದಿನ ಬದುಕಿನ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಮಗ್ರವಾಗಿ ಚರ್ಚಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಹಿತರಕ್ಷಣೆ ಹಾಗೂ ರೈತರು, ಬೆಳೆಗಾರರು ಮತ್ತು ಸಾರ್ವಜನಿಕರ ಭವಿಷ್ಯದ ದೃಷ್ಟಿಯಿಂದ ಎಲ್ಲರ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಒಮ್ಮತದ ನಿರ್ಧಾರ ಹಾಗೂ ಸಲಹೆಗಳನ್ನು ಕ್ರೋಢೀಕರಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸಂಸದ ಯದುವೀರ್ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ತಾ. ೨೭ ರಂದು ಬೆಳಿಗ್ಗೆ ೧೧ ಗಂಟೆಗೆ ಮಡಿಕೇರಿ ನಗರದ ರಾಜದರ್ಶನ್ ಹೋಟೆಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ.