ಕೂಡಿಗೆ, ಆ. ೨೫: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ ತರಗತಿಯ ಪ್ರಾರಂಭೋತ್ಸವ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮಕ್ಕೆ ಕೂಡಿಗೆ ಡಯಟ್‌ನ ಪ್ರಾಂಶುಪಾಲ ರಾಮಚಂದ್ರ ರಾಜೇ ಅರಸು ಚಾಲನೆ ನೀಡಿ ಮಾತನಾಡಿದರು.

ಸೋಮವಾರಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಕೂಡಿಗೆ ಕ್ಲಸ್ಟರ್ನ ಸಿ.ಆರ್.ಪಿ. ಶಾಂತಕುಮಾರ್, ಸೋಮವಾರಪೇಟೆ ತಾಲೂಕಿನ ದೈಹಿಕ ಶಿಕ್ಷಣಾಧೀಕ್ಷಕ ಸೂಫಿ ಪೆರಾಜೆ, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಶಾಲಾ ಮುಖ್ಯ ಶಿಕ್ಷಕಿ ಎಂ. ರೇಣುಕಾ, ಸಹ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.