ಕುಶಾಲನಗರ, ಆ. ೨೬: ಕುಶಾಲನಗರ ತಾಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕುಶಾಲನಗರ ಲಯನ್ಸ್ ಕ್ಲಬ್ ವತಿಯಿಂದ ಶಾಲೆಯ ಇಕೋ ಕ್ಲಬ್ ಮತ್ತು ಎನ್.ಎಸ್.ಎಸ್.ಘಟಕದ ಸಹಯೋಗದೊಂದಿಗೆ ಕೂಡ್ಲೂರು ಗ್ರಾಮದ ಪ್ರಗತಿಪರ ರೈತ ಕೆ.ಎಸ್.ರಾಜಾಚಾರಿ ಅವರ ಭತ್ತದ ಗದ್ದೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷವಾಗಿ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ಕೆಸರುಗದ್ದೆ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಲಯನ್ಸ್ ಕ್ಲಬ್ನ ಅಧ್ಯಕ್ಷ ಕೆ.ಎನ್. ಪವನ್ ಕುಮಾರ್, ರೈತರ ಕೃಷಿ ಜೀವನ ಹಾಗೂ ಗ್ರಾಮೀಣ ಕೃಷಿ ಸಂಸ್ಕೃತಿಯನ್ನು ಪರಿಚಯಿಸಲು ಮತ್ತು ಮಕ್ಕಳಲ್ಲಿ ಕ್ರೀಡಾ ಮನೋಭಾವನೆ ಬೆಳೆಸಲು ಈ ವಿಶಿಷ್ಠ ಗ್ರಾಮೀಣ ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು.
ಕ್ರೀಡಾಕೂಟಗಳಿAದ ಮಕ್ಕಳಿಗೆ ರೈತರ ಜೀವನ ಹಾಗೂ ಕೃಷಿ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬಹುದು. ಈ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಹೆಚ್ಚಿನ ಉತ್ತೇಜನ ನೀಡಿದಂತಾಗುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಪ್ರಬಾರ ಮುಖ್ಯೋಪಾಧ್ಯಾಯ ಕೆ.ಗೋಪಾಲಕೃಷ್ಣ, ವಿದ್ಯಾರ್ಥಿಗಳಲ್ಲಿ ಕೃಷಿ ಚಟುವಟಿಕೆಗಳು, ರೈತರ ಕೃಷಿ ಬದುಕು, ದೇಶದ ಕೃಷಿ ಜೀವನ ಬಗ್ಗೆ ಅರ್ಥ ಮಾಡಿಕೊಳ್ಳುವ ದಿಸೆಯಲ್ಲಿ ಶಾಲೆಯ ವತಿಯಿಂದ ಸಂಘಟಿಸಲಾಗುತ್ತಿದ್ದು, ಈ ಕ್ರೀಡಾಕೂಟಕ್ಕೆ ಲಯನ್ಸ್ ಕ್ಲಬ್ ವತಿಯಿಂದ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗಿದೆ ಎಂದರು.
ಜಿಲ್ಲಾ ಲಯನ್ಸ್ ಕ್ಲಬ್ನ ಗ್ಲೋಬಲ್ ಸರ್ವಿಸ್ ವಿಭಾಗದ ಚೀಫ್ ಕೋರ್ಡಿನೇಟರ್ ಸುಮನ್ ಬಾಲಚಂದ್ರ ಮಾತನಾಡಿ, ಕ್ರೀಡೆಯು ಮಕ್ಕಳಲ್ಲಿ ಪರಸ್ಪರ ಭ್ರಾತೃತ್ವ ಬೆಳೆಸುವುದರೊಂದಿಗೆ ಅವರ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿ ಎಂದು ಹಾರೈಸಿದರು. ಲಯನ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಟಿ.ಕೆ.ರಾಜಶೇಖರ್, ಗ್ರಾಮದ ಪ್ರಗತಿಪರ ರೈತ ಕೆ.ಎಸ್ ರಾಜಾಚಾರಿ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನAದ ಪ್ರಕಾಶ್, ಗ್ರಾಮ ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಸಿ.ಜವರೇಗೌಡ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ, ಲಯನ್ಸ್ ಕ್ಲಬ್ನ ನಿಕಟಪೂರ್ವ ಅಧ್ಯಕ್ಷ ನಾರಾಯಣ್, ಡಾ ಪ್ರವೀಣ್ ದೇವರಗುಂಡ ಸೋಮಪ್ಪ, ಉಪಾಧ್ಯಕ್ಷ ನಿತಿನ್ ಗುಪ್ತ, ಕಾರ್ಯದರ್ಶಿ ಕಿರಣ್ ಗೌಡ, ಕೋಶಾಧಿಕಾರಿ ಡಾ ರಾಘವೇಂದ್ರ, ಪದಾಧಿಕಾರಿಗಳಾದ ವೀಣಾ ಪವನ್ ಕುಮಾರ್, ನವ್ಯ ಮತ್ತಿತರರು ಇದ್ದರು.
ಗಮನ ಸೆಳೆದ ಕೆಸರುಗದ್ದೆ ಕ್ರೀಡಾಕೂಟ
ಮಕ್ಕಳು ಓಟದ ಸ್ಪರ್ಧೆ, ಹಗ್ಗ ಜಗ್ಗಾಟ, ಬೊಗಸೆಯಿಂದ ಲೋಟಕ್ಕೆ ಸ್ಪರ್ಧೆ ಸೇರಿದಂತೆ ಕೆಸರುಗದ್ದೆಯ ಕ್ರೀಡಾ ಸ್ಪರ್ಧೆಗಳಲ್ಲಿ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಗಮನ ಸೆಳೆಯಿತು. ಲಯನ್ಸ್ ಕ್ಲಬ್ ವತಿಯಿಂದ ಕ್ಲಬ್ನ ಅಧ್ಯಕ್ಷ ಕೆ.ಎನ್.ಪವನ್ ಕುಮಾರ್ ಮತ್ತು ವೀಣಾ ಪವನ್ ಕುಮಾರ್ ನಗದು ಬಹುಮಾನ ನೀಡಿ ಮಕ್ಕಳ ಕ್ರೀಡೆಗೆ ಪ್ರೋತ್ಸಾಹ ನೀಡಿದರು. ಇದೇ ಸಂದರ್ಭ ಪ್ರಗತಿಪರ ರೈತ ಕೆ.ಎಸ್.ರಾಜಾಚಾರಿ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.