ಕುಶಾಲನಗರ, ಆ. ೨೬: ಕೊಡಗು ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ತಾ. ೨೮ ರಂದು ಕುಶಾಲನಗರದಲ್ಲಿ ಸಾರ್ವಜನಿಕರಿ ಗಾಗಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೩ ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಆವರ್ತಿ ಆರ್. ಮಹದೇವಪ್ಪ ತಿಳಿಸಿದ್ದಾರೆ.