ನಾಪೋಕ್ಲು, ಆ. ೨೬: ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ (ಓಆಖಈ) ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡದಿAದ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು.ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡ ಕೊಡಗು ಜಿಲ್ಲಾ ಘಟಕದಿಂದ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರಕೃತಿ ವಿಕೋಪದ ಸಂದರ್ಭಗಳು ಹಾಗೂ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜೀವ ರಕ್ಷಣಾ ಕ್ರಮಗಳ ಬಗ್ಗೆ ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡದಿAದ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ತರಬೇತಿಯನ್ನು ನೀಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಓಆಖಈ ತಂಡದ ಟೀಮ್ ಕಮಾಂಡರ್ ಸಬ್ ಇನ್ಸ್ಪೆಕ್ಟರ್ ಅರುಣ್ ಮುರುಗನ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ನರೇಂದ್ರ ಸಿಂಗ್ ಯಾದವ್, ರೆಸ್ಕೂö್ಯ ಕಮಾಂಡರ್ ನಾಗರಾಜ್ ಎ ಪಿ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಭೂಕಂಪ, ಅಗ್ನಿ ಅನಾಹುತ, ಹೃದಯಾಘಾತದ ಸಂದರ್ಭಗಳಲ್ಲಿ ತೆಗೆದುಕೊಳ್ಳಬೇಕಾದ ತುರ್ತು ಕ್ರಮಗಳು ಮುಂತಾದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಕುದುಪಜೆ ಕವನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಬಬ್ಬಿರ ಸ್ವರೂಪ್, ಶಿಕ್ಷಕವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.