ಕುಶಾಲನಗರ, ಆ. ೨೬: ಕೊಡಗು ಜಿಲ್ಲೆಯ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಹಾಗೂ ಅಭಿವೃದ್ಧಿಗೆ ಸರಕಾರ ವಿಶೇಷ ಕಾಳಜಿ ವಹಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳೊAದಿಗೆ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿದ್ದು ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿ, ನೀರಾವರಿ ಸಂಬAಧಿಸಿದ ಕಾಮಗಾರಿಗಳು ಸೇರಿದಂತೆ ಮೂಲಭೂತ ವ್ಯವಸ್ಥೆಗಳಿಗೆ ವಿಶೇಷ ಅನುದಾನ ಕಲ್ಪಿಸುವ ಬಗ್ಗೆ ಚರ್ಚೆ ನಡೆದಿದೆ.

ಜಿಲ್ಲೆಯಲ್ಲಿ ಮೋಡ ಬಿತ್ತನೆ ಪ್ರಾರಂಭ ಮಾಡಿಲ್ಲ. ಮೋಡ ಬಿತ್ತನೆ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದ ಮಂತರ್ ಗೌಡ, ಈ ಬಗ್ಗೆ ನೀರಾವರಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಮೋಡ ಬಿತ್ತನೆಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದ ಸಾಧ್ಯತೆ ಬಗ್ಗೆ ಮನವರಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಕಸ್ತೂರಿರಂಗನ್ ವರದಿ ಬಗ್ಗೆ ಸರ್ಕಾರ ಈಗಾಗಲೇ ತಿರಸ್ಕಾರ ಮಾಡಿದೆ. ಕೇಂದ್ರದ ಒತ್ತಡದ ಮೂಲಕ ಅನುಷ್ಠಾನ ಮಾಡಿದಲ್ಲಿ ಜಿಲ್ಲೆಯ ಜನತೆಗೆ ಅನಾನುಕೂಲ ಉಂಟಾಗುವ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದ್ದು, ತಾ. ೨೮ ರಂದು ಅರಣ್ಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಹಾಗೂ ಜಿಲ್ಲೆಯಲ್ಲಿ ಗ್ರಾಮ ಸಭೆ ನಡೆಸುವ ಮೂಲಕ ಕಸ್ತೂರಿರಂಗನ್ ವರದಿಯ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುವುದಾಗಿ ಹೇಳಿದರು. ಪಶ್ಚಿಮ ಘಟ್ಟದ ಅಂಚಿನಲ್ಲಿ ನೆಲೆಸಿದ ನಿವಾಸಿಗಳಿಗೆ ಅಭದ್ರತೆ ಆತಂಕದ ವಾತಾವರಣ ಸೃಷ್ಟಿಯಾಗುವುದನ್ನು ತಪ್ಪಿಸ ಬೇಕಾಗಿದೆ ಎಂದರು.