ಕೂಡಿಗೆ, ಆ. , ೨೭: ಹಾರಂಗಿ ಅಣೆಕಟ್ಟೆಯಿಂದ ಪ್ರಸಕ್ತ ಸಾಲಿನ ಖಾರೀಫ್ ಬೆಳೆಗೆ ನೀರು ಹರಿಸುವ ಸಂಬAಧ ಕೃಷಿ ಸಚಿವರಾದ ಪಿ.ಎಂ ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು.
ಸಭೆಯಲ್ಲಿ ಅಣೆಕಟ್ಟೆಯಲ್ಲಿ ಸಂಗ್ರಹವಿರುವ ನೀರಿನ ಮಾಹಿತಿ, ನೀರಿನ ಲಭ್ಯತೆ, ಬೆಳೆಗಳಿಗೆ ನೀರು ಹರಿಸುವ ಬಗ್ಗೆ ಚರ್ಚೆಗಳು ನಡೆದವು. ರೈತರಿಗೆ ಯಾವುದೇ ರೀತಿಯ ತೊಂದರೆಗಳು ಆಗದಂತೆ ನಿಗಾವಹಿಸುವ ಸಂಬAಧ ಹಾಗೂ ನೀರಿನ ನಿರ್ವಹಣೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು.
ಅಣೆಕಟ್ಟೆಯು ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಅಚ್ಚುಕಟ್ಟು ಪ್ರದೇಶಗಳ ಕೊನೆಯ ಭಾಗದವರೆಗೆ ನೀರು ಹರಿಸಿ ಬೇಸಾಯಕ್ಕೆ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ಕ್ರಮ ವಹಿಸುವ ಸಂಬAಧ ಚರ್ಚೆ ನಡೆಯಿತು.
ಸಭೆಯಲ್ಲಿ ಮಾಜಿ ಸಚಿವರು ಹಾಗೂ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ವೆಂಕಟೇಶ್, ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಎ.ಮಂಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಕೆ.ಆರ್. ನಗರ ಶಾಸಕ ರವಿಶಂಕರ್, ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಹುಣಸೂರು ಕ್ಷೇತ್ರದ ಶಾಸಕ ಹರೀಶ್ ಗೌಡ, ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಮಹಾಮಂಡಲದ ಅಧ್ಯಕ್ಷ ಜೌಡೇಗೌಡ, ಕಾವೇರಿ ನಿಗಮದ ವ್ಯವಸ್ಥಾಪಕ ಮಹೇಶ್, ರಾಜ್ಯ ಮುಖ್ಯ ಇಂಜಿನಿಯರ್ ಗಣೇಶ್, ಹಾರಂಗಿ ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತರ ಸತೀಶ್, ಕಾರ್ಯಪಾಲಕ ಅಭಿಯಂತರ ಮಹೇಶ್, ಸೇರಿದಂತೆ ಇಲಾಖೆಯ ಇಂಜಿನಿಯರ್ಗಳು ಅಧಿಕಾರಿ ವರ್ಗದವರು ಇದ್ದರು. - ಕೆ.ಕೆ. ನಾಗರಾಜಶೆಟ್ಟಿ.