ಮಡಿಕೇರಿ, ಆ. ೨೭: ನೂತನವಾಗಿ ಆರಂಭಗೊAಡಿರುವ ವಿಬಿಜಿರಾಮ್‌ಜಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕೊಡಗು ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.

ವೀರಾಜಪೇಟೆ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ವಿಬಿಜಿರಾಮ್‌ಜಿ ಯೋಜನೆಯಡಿ ಸಮುದಾಯ ಮತ್ತು ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅವಕಾಶವಿದ್ದು, ಈ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿ.ಪಂ. ಉಪ ಕಾರ್ಯದರ್ಶಿ ಅಬ್ದುಲ್ ನಬಿ ಮಾತನಾಡಿ, ಜಿಲ್ಲೆಯಲ್ಲಿ ಕೃಷಿಕರಿಗೆ ದನದ ಕೊಟ್ಟಿಗೆ, ಹಂದಿ ಶೆಡ್, ಕೋಳಿ ಶೆಡ್ ಮತ್ತು ವಿವಿಧ ವೈಯಕ್ತಿಕ ಹಾಗೂ ಸಮುದಾಯಾಧಾರಿತ ಕಾಮಗಾರಿ ಒಳಗೊಂಡAತೆ ೩೧೮ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ ಎಂದು ತಿಳಿಸಿದರು. ಭಾರತ್ ಜೋಡೋ ಯುವಕ ಸಂಘದ ನೋಂದಣಿ ಪ್ರತಿ ಗ್ರಾ.ಪಂ.ಗಳಲ್ಲಿಯೂ ಕನಿಷ್ಟ ೧೦೦ ಜನ ಯುವಕ - ಯುವತಿಯರ ಹೆಸರು ನೋಂದಾಯಿಸುವAತೆ ಸೂಚಿಸಿದರು. ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಶ್ರೀನಿವಾಸ್ ಇದ್ದರು.