ಕೂಡಿಗೆ, ಆ. ೨೭: ಸೋಮವಾರಪೇಟೆ ತಾಲೂಕಿನ ಅನುದಾನ, ಅನುದಾನ ರಹಿತ, ವಸತಿ, ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಅಂಗವಾಗಿ ಹೆಬ್ಬಾಲೆ ಪ್ರೌಢಶಾಲಾ ಮೈದಾನದಲ್ಲಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ತಾ. ೨೯ ರಂದು ನಡೆಯಲಿವೆ. ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಉದ್ಘಾಟನೆಯನ್ನು ಶಾಸಕ ಡಾ.ಮಂತರ್ ಗೌಡ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ, ಶಿಕ್ಷಣಾಧಿಕಾರಿ, ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.