ಪೊನ್ನಂಪೇಟೆ, ಆ. ೨೭: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನವನ್ನು ಆಚರಿಸಲಾಯಿತು.
ಪ್ರಾಂಶುಪಾಲ ಪ್ರೊ. ಎಸ್.ಎಸ್. ಮಾದಯ್ಯ ಅವರು ವಿದ್ಯಾರ್ಥಿಗಳಿಗೆ ಸದ್ಭಾವನಾ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಮಾತನಾಡಿದ ಅವರು ದೇಶದಲ್ಲಿ ಜಾತಿ, ಮತ, ಭಾಷೆ, ಪ್ರದೇಶಗಳ ಭೇದ ಮರೆತು ಸೌಹಾರ್ದತೆಯಿಂದ ಬದುಕಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕ ಕ್ಯಾಪ್ಟನ್ ಬ್ರೈಟ್ ಕುಮಾರ್, ಎನ್.ಸಿ.ಸಿ. ಅಧಿಕಾರಿ ಡಾ. ಲೆಫ್ಟಿನೆಂಟ್ ಅಕ್ರಂ, ಉಪನ್ಯಾಸಕ ಚೇತನ್ ಚಿಣ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.