ವೀರಾಜಪೇಟೆ, ಆ. ೨೭: ವೀರಾಜಪೇಟೆ ನಗರದ ಛÀತ್ರಕೆರೆ ಬಳಿಯಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ತಾ. ೩೦ ರಂದು ಶ್ರೀ ರಾಘವೇಂದ್ರ ಸ್ವಾಮಿಗಳ ೩೫೧ ನೇ ಆರಾಧನಾ ಮಹೋತ್ಸವವನ್ನು ಆಚರಿಸಲಾಗುವುದು.
ಆರಾಧನಾ ಮಹೋತ್ಸವದ ಅಂಗವಾಗಿ ಅಂದು ಬೆಳಿಗ್ಗೆಯಿಂದಲೇ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದು ಮಧ್ಯಾಹ್ನ ೧೨-೩೦ ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗ ಬಳಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.