ಮುಳ್ಳೂರು, ಆ. ೨೮: ಕೈಲ್ ಮುಹೂರ್ತ ಹಬ್ಬದ ಪ್ರಯುಕ್ತ ಸಮೀಪದ ಆಲೂರು-ಸಿದ್ದಾಪುರ ವಿಜಯ ಯುವಕ ಸಂಘದ ವತಿಯಿಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಗ್ರಾಮೀಣ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.

ಸೆ. ೩ ರಂದು ಬೆಳಿಗ್ಗೆ ೮.೩೦ಕ್ಕೆ ನಡೆಯಲಿರುವ ಕ್ರೀಡಾಕೂಟವನ್ನು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಸ್.ಕೆ. ಉದಯ್, ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶೃತಿ, ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರಾಂಶುಪಾಲ ಪ್ರಕಾಶ್ ಅವರುಗಳು ಉದ್ಘಾಟಿಸುವರು.

ಸಂಜೆ ೫ ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಜಯ ಯುವಕ ಸಂಘದ ಅಧ್ಯಕ್ಷ ಕುಯ್ಯಮುಡಿ ಕಿರಣ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್, ಎಂಎಲ್‌ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಪ್ರಮುಖರಾದ ನಾಪಂಡ ಮುತ್ತಪ್ಪ, ನಾಪಂಡ ಮುದ್ದಪ್ಪ, ಜೆ.ಎಸ್. ವಿರೂಪಾಕ್ಷಯ್ಯ, ನಂಗಾರು ನಿಂಗರಾಜು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.