ಸಿದ್ದಾಪುರ ಆ. ೨೮: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಪಟ್ಟಣದಲ್ಲಿ ರಸ್ತೆಗಳು ಗುಂಡಿ ಬಿದ್ದು ಸಂಚಾರಕ್ಕೆ ಸಂಚಕಾರವಾಗಿದೆ ಎಂದು ಆರೋಪಿಸಿ ಸಿದ್ದಾಪುರದ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭ ಜಿಲ್ಲಾ ಬಿಜೆಪಿ ಸಮಿತಿಯ ಪ್ರಮುಖರಾದ ಬಿ.ಕೆ. ಅನಿಲ್ ಶೆಟ್ಟಿ ಮಾತನಾಡಿ, ಸಿದ್ದಾಪುರ ಪಟ್ಟಣ ಸೇರಿದಂತೆ ಪ್ರಮುಖ ರಸ್ತೆಗಳು ಹೊಂಡ-ಗುAಡಿಗಳಿAದ ಕೂಡಿದ್ದು ವಾಹನ ಸಂಚರಿಸಲು ಸಮಸ್ಯೆ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ವತಿಯಿಂದ ಸಿದ್ದಾಪುರದ ಬಸ್ ನಿಲ್ದಾಣ ಸೇರಿದಂತೆ ಪಟ್ಟಣ ವ್ಯಾಪ್ತಿಯ ಗುಂಡಿಗಳನ್ನು ಮುಚ್ಚುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಒತ್ತಾಯಿಸಿದರು.
ಈ ಸಂದರ್ಭ ಸಿದ್ದಾಪುರ ಶಕ್ತಿ ಕೇಂದ್ರದ ಪ್ರಮುಖರಾದ ರೂಪೇಶ್, ಡಿಜಿತ್, ಬಿಜೆಪಿ ಪಕ್ಷದ ಪದಾಧಿಕಾರಿಗಳಾದ ಹರಿದಾಸ್, ಜಯಂತ್ ಗೌಡ, ಅಯ್ಯಪ್ಪ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಜರಿದ್ದರು. ನಂತರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸತೀಶ್ ಅವರಿಗೆ ಮನವಿ ಪತ್ರ ನೀಡಿದರು.