ನಾಪೋಕ್ಲು, ಆ. ೨೮: ಇಲ್ಲಿಗೆ ಸಮೀಪದ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಯುವಕ ಸಂಘದ ವತಿಯಿಂದ ಕೈಲ್ ಮುಹೂರ್ತ ಹಬ್ಬದ ಕ್ರೀಡಾಕೂಟವನ್ನು ತಾ. ೩೦ರಂದು ಬೇತು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ.

ಮಧ್ಯಾಹ್ನ ೧.೩೦ ಗಂಟೆಗೆ ನಡೆಯುವ ಆಟೋಟಗಳ ಸ್ಪರ್ಧೆಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೂತ್ ಕ್ಲಬ್ ಅಧ್ಯಕ್ಷ ಕಾಳೆಯಂಡ ರಿನೇಶ್ ಪೊನ್ನಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ವ್ಯವಸ್ಥಾಪಕ ಚೋಕಿರ ಪೂವಯ್ಯ ಉಪಸ್ಥಿತರಿರುವರು. ಬಹುಮಾನ ವಿತರಣೆಯನ್ನು ಕಾಫಿ ಬೆಳೆಗಾರ ಚೋಕಿರ ಗಣೇಶ್ ನಿರ್ವಹಿಸುವರು. ಆಟೋಟಗಳ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ, ಸಾರ್ವಜನಿಕ ಮಹಿಳೆಯರಿಗೆ, ಸಾರ್ವಜನಿಕರಿಗೆ ಹಾಗೂ ವಯಸ್ಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.