ಮಡಿಕೇರಿ, ಆ. ೨೮: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮಡಿಕೇರಿ, ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಮಡಿಕೇರಿ ಆದಾಯ ತೆರಿಗೆ ಇಲಾಖೆಯ ಸಹಯೋಗದೊಂದಿಗೆ "ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು” ಎಂಬ ವಿಷಯದ ಕುರಿತು ಕಾರ್ಯಾಗಾರ ವನ್ನು ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ರಾಘವ ಬಿ. ವಹಿಸಿದ್ದರು. ಆದಾಯ ತೆರಿಗೆ ಅಧಿಕಾರಿ ಮಂಜುನಾಥ ಮೃತ್ಯುಂಜಯ, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪ್ರದೀಪ್ ಆರ್. ಭಂಡಾರಿ ಸ್ವಾಗತಿಸಿದರು.
ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಂಶುಪಾಲ ಮೇಜರ್ ಡಾ. ರಾಘವ ಬಿ. ಅವರು ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಆದಾಯ ತೆರಿಗೆಯ ಮಹತ್ವವನ್ನು ಮತ್ತು ನಾಗರಿಕರ ಜವಾಬ್ದಾರಿಯ ಕುರಿತು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾದ ಮಂಜುನಾಥ ಮೃತ್ಯುಂಜಯ ಅವರು ಆದಾಯ ತೆರಿಗೆ, ಅದರ ಪ್ರಾಯೋಗಿಕ ಮಹತ್ವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ದೊರೆಯುವ ಉದ್ಯೋಗಾವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥೆ ಡಾ. ಶೈಲಶ್ರೀ ಕೆ. ಹಾಗೂ ವಿಭಾಗದ ಎಲ್ಲಾ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.