ಮಡಿಕೇರಿ, ಆ. ೨೯: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವಲಯ ಅಧ್ಯಕ್ಷರುಗಳ ಸಭೆ ಹುದಿಕೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭಾಗವಹಿಸಿ ಮಾತನಾಡಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎಲ್ಲಾ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬ ವಲಯ ಅಧ್ಯಕ್ಷ ತಮ್ಮ ವಲಯ ವ್ಯಾಪ್ತಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದರು.
ವಿಶೇಷವಾಗಿ ಕರ್ನಾಟಕ ರಾಜ್ಯ ಸರಕಾರ ಯುವ ಜನತೆಯನ್ನು ಒಗ್ಗೂಡಿಸಿ ಅನುಕೂಲ ಆಗಲು ಹಮ್ಮಿಕೊಂಡಿರುವ ಭಾರತ್ ಜೋಡೋ ಯೋಜನೆ, ಗ್ಯಾರೆಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಹಾಗೂ ಯೋಜನೆಯು ಪ್ರತಿಯೊಬ್ಬ ಫಲಾನುಭವಿಗಳಿಗೆ ತಲುಪು ವಂತೆ ನೋಡಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪೊನ್ನಂಪೇಟೆ ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ ಬಾನಂಡ ಪ್ರತ್ಯು, ಪೊನ್ನಂಪೇಟೆ ಬ್ಲಾಕಿನ ಎಲ್ಲಾ ವಲಯ ಅಧ್ಯಕ್ಷರುಗಳು, ಪಕ್ಷದ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.