ಮಡಿಕೇರಿ, ಆ. ೨೯: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ೧೯ನೇ ಕೊಡವ ಪುಸ್ತಕ ಪತ್ತಾಯವನ್ನು ಕೈಕೇರಿಯ ಸವಿತಾ ಸಮಾಜದಲ್ಲಿ ಸೆಪ್ಟೆಂಬರ್ ೧ ರಂದು ಮಧ್ಯಾಹ್ನ ೩ ಗಂಟೆಗೆ ನಡೆಸಲು ತೀರ್ಮಾನಿಸಲಾಗಿದೆ.
ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಶಾಸಕರು ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೈಕೇರಿ ಸವಿತಾ ಸಮಾಜದ ಅಧ್ಯಕ್ಷರು, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರೂ ಆಗಿರುವ ನಾಯಂದಿರ ಆರ್. ಶಿವಾಜಿ, ಕೈಕೇರಿ ಸವಿತಾ ಸಮಾಜದ ಉಪಾಧ್ಯಕ್ಷ ಮುಡುವಂಡ ಎಸ್. ರಮೇಶ, ನಿರ್ದೇಶಕ ತಾಪನೆರ ಎಂ. ಸುರೇಶ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.