ಮಡಿಕೇರಿ, ಆ. ೨೯: ಮಡಿಕೇರಿ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣಾಷ್ಟಮಿ ಹಾಗೂ ಶ್ರೀ ಕೃಷ್ಣ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್ ೪ರಂದು ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ದೇವಾಲಯದಲ್ಲಿ ರಾತ್ರಿ ವಿಶೇಷ ಪೂಜೆ ನೆರವೇರಲಿದ್ದು, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ವತಿಯಿಂದ ವಿಶೇಷ ಭಜನಾ ಕಾರ್ಯಕ್ರಮವೂ ನಡೆಯಲಿದೆ.

ಮೊಸರು ಕುಡಿಕೆ ಒಡೆಯುವ ಸ್ಪರ್ಧೆ, ಮಕ್ಕಳಿಗೆ ಛದ್ಮವೇಷ ಸ್ಪರ್ಧೆ, ಸೆಪ್ಟೆಂಬರ್ ೬ರಂದು ಸಂಜೆ ೪ ಗಂಟೆಗೆ ಶ್ರೀ ಕೃಷ್ಣ ಜಯಂತಿ ಅಂಗವಾಗಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ೬ ವರ್ಷದೊಳಗಿನ ಮಕ್ಕಳಿಗಾಗಿ ಶ್ರೀ ಕೃಷ್ಣ ಹಾಗೂ ರಾಧೆ ಛದ್ಮವೇಷ ಸ್ಪರ್ಧೆಯನ್ನೂ ಹಮ್ಮಿಕೊಳ್ಳಲಾಗಿದೆ.

ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಾಯಿಸುವವರು ಕೆಳಗಿನ ಮೊಬೈಲ್ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ. ಜಿ.ಎಲ್. ದಾಸ - ೯೪೮೨೧ ೯೨೨೪೮, ಜಿ.ಸಿ. ರಮೇಶ್ - ೯೭೩೧೪ ೧೧೫೨೩, ಜಿ.ಆರ್. ಗಣೇಶ್ - ೮೦೯೫೮ ೫೮೮೬೪.