ಮಡಿಕೇರಿ, ಆ. ೩೦: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಬಾಲಕನ ಪೋಷಕರಿಗೆ ವೀರಾಜಪೇಟೆ ಪ್ರಧಾನ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ರೂ. ೨೫ ಸಾವಿರ ದಂಡ, ಬಾಲ ನ್ಯಾಯ ಮಂಡಳಿ ರೂ. ೫ ಸಾವಿರ ದಂಡ ವಿಧಿಸಿದೆ.
ಇತ್ತೀಚಿನ ದಿನಗಳಲ್ಲಿ ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕರು ಕಾರು ಹಾಗೂ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿರುವ ಸಂಬAಧ ಬಾಲಕರ ಪೋಷಕರಿಗೆ ದಂಡ ವಿಧಿಸಲಾಗುತ್ತಿದೆ. ಅಲ್ಲದೆ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವುದು ಸೇರಿದಂತೆ ವಿವಿಧ ಪ್ರಕರಣಗಳಡಿ ಹಲವಾರು ವಾಹನಗಳಿಗೆ ಈಗಾಗಲೇ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.