ಸೋಮವಾರಪೇಟೆ, ಆ. ೩೦: ರೋಟರಿ ಸೋಮವಾರಪೇಟೆ ಹಿಲ್ಸ್ ವತಿಯಿಂದ ಕೂಡಿಗೆ ಶಕ್ತಿ ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು.

ರೋಟರಿ ಅಧ್ಯಕ್ಷ ಬಿ.ಎಸ್. ಸುಂದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಹಿರಿಯರು ನಡೆದು ಬಂದ ದಾರಿ ಕಿರಿಯರಾದ ನಮಗೆಲ್ಲರಿಗೂ ದಾರಿದೀಪವಿದ್ದಂತೆ. ಹಿರಿಯರನ್ನ ಗೌರವಿಸುವುದು ಹಾಗೂ ಹಿರಿಯರಿಂದ ಮಾರ್ಗದರ್ಶನ ಪಡೆಯುವುದರ ಮೂಲಕ ಮುಂದಿನ ಪೀಳಿಗೆ ಬದುಕು ಕಟ್ಟಿಕೊಳ್ಳಬೇಕು ಎಂದರು.

ದಿನದ ಅಂಗವಾಗಿ ರೋಟರಿ ಸಂಸ್ಥೆಯಿAದ ವೃದ್ದಾಶ್ರಮವಾಸಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಲಾಯಿತು. ಇದರೊಂದಿಗೆ ‘ಪಾಕೆಟ್ ಮನಿ’ ವಿತರಿಸಲಾಯಿತು. ಈ ಸಂದರ್ಭ ಸಂಸ್ಥೆಯ ಪದಾಧಿಕಾರಿಗಳಾದ ವಿದ್ಯಾ ಸುಂದರ್, ಮಲ್ಲೇಶ್, ದೀಪಾ, ರೋಟರಿ ಸದಸ್ಯರು ಉಪಸ್ಥಿತರಿದ್ದರು. ಮಡಿಕೇರಿ: ಚೆಟ್ಟಳ್ಳಿ ಪ್ರೌಢಶಾಲೆಯ ಮಂಗಳಾ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಹಿರಿಯ ನಾಗರಿಕರಿಗೆ ಗೌರವ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಾದ ಪೇರಿಯನ ಪಿ. ಜಯಾನಂದ, ಎಚ್.ಎಸ್. ತಿಮ್ಮಪ್ಪಯ್ಯ, ಕ್ಯಾಪ್ಟನ್ ಎಂ.ಪಿ. ತಿಮ್ಮಯ್ಯ ಹಾಗೂ ಹೊಸಮನೆ ಪೂವಯ್ಯ ಅವರನ್ನು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್. ರಾಜೇಶ್, ನಿರ್ದೇಶಕರಾದ ಕಟ್ಟೆಮನೆ ಸೋನಾಜಿತ್, ಲವಿನ್ ಹಾಗೂ ಕಾಂಗೀರ ಸತೀಶ್ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾಫಿ ಬೆಳೆಗಾರ ಎಚ್.ಎಸ್. ತಿಮ್ಮಪ್ಪಯ್ಯ, ರೋಟರಿ ಮಿಸ್ಟಿ ಹಿಲ್ಸ್ನ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಚೆಟ್ಟಳ್ಳಿ ಪ್ರೌಢಶಾಲೆಯ ಸ್ಥಾಪನೆಗೆ ಕಾರಣರಾದ ಹಿರಿಯರ ತ್ಯಾಗ ಹಾಗೂ ಸೇವಾ ಮನೋಭಾವ ಸದಾ ಸ್ಮರಣೀಯ ಎಂದರು.

ಸನ್ಮಾನಿತರಾದ ಕ್ಯಾಪ್ಟನ್ ಎಂ.ಪಿ. ತಿಮ್ಮಯ್ಯ ಭಾರತೀಯ ಸೇನೆಗೆ ಸೇರ್ಪಡೆಗೊಂಡ ಸಂದರ್ಭ ಹಾಗೂ ಸೇನಾ ಸೇವೆಯ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊAಡರು.

ಶಾಲಾ ಆಡಳಿತ ಮಂಡಳಿಯ ಸಂಚಾಲಕ ಮುಳ್ಳಂಡ ರತ್ತು ಚೆಂಗಪ್ಪ ಮಾತನಾಡಿ, ಹಿರಿಯರು ದೇಶವನ್ನು ಕಟ್ಟಿ ಬೆಳೆಸಿದ್ದಾರೆ. ಅವರ ಸೇವೆ ಹಾಗೂ ಮಾರ್ಗದರ್ಶನವನ್ನು ಮುಂದುವರಿಸುವ ಜವಾಬ್ದಾರಿ ಯುವಪೀಳಿಗೆಯ ಮೇಲಿದೆ. ಹಿರಿಯರನ್ನು ಗೌರವಿಸಿ, ಅವರ ಮಾರ್ಗದರ್ಶನ ಪಡೆದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು ಮಡಿಕೇರಿ: ಎಸ್. ಕಟ್ಟೆಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ಜೀವಗಳಿಗೆ ಗೌರವ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕಟ್ಟೆಮಾಡು ಗ್ರಾಮದ ಹಿರಿಯರಾದ ಕಳ್ಳೀರ ಗಣಪತಿ, ಬಿದ್ರುಪಣೆ ಬೋಜಪ್ಪ ಹಾಗೂ ನಂದೇಟಿರ ದೇವಯ್ಯ ಅವರನ್ನು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದ ಹಿರಿಯರಾದ ಕಳ್ಳೀರ ಗಣಪತಿ, ವಿದ್ಯಾರ್ಥಿಗಳು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಂದೇಟಿರ ದೇವಯ್ಯ, ತಮ್ಮ ಬಾಲ್ಯದ ದಿನಗಳು ಹಾಗೂ ಸೇನಾ ಸೇವೆಯ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊAಡರು.

ರೋಟರಿ ಮಿಸ್ಟಿ ಹಿಲ್ಸ್ ನಿರ್ದೇಶಕ ಕಟ್ಟೆಮನೆ ಸೋನಾಜಿತ್ ಹಿರಿಯ ನಾಗರಿಕರ ದಿನದ ಮಹತ್ವದ ಕುರಿತು ಮಾತನಾಡಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ತಮ್ಮಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ರೋಟರಿ ಮಿಸ್ಟಿ ಹಿಲ್ಸ್ ನಿರ್ದೇಶಕರಾದ ಕೋಚನ ಲವಿನ್, ಕಾಂಗೀರ ಸತೀಶ್ ಹಾಗೂ ಮನೋಜ್ ಕುಮಾರ್ ಉಪಸ್ಥಿತರಿದ್ದರು.

ಶಿಕ್ಷಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಸನ್ಮಾನಿತರ ಪರಿಚಯವನ್ನು ಮುಖ್ಯಶಿಕ್ಷಕಿ ಬಿಂದು ಹಾಗೂ ಶಿಕ್ಷಕಿ ಪ್ರೀತ ನೆರವೇರಿಸಿದರು.