ಮಡಿಕೇರಿ, ಆ. ೩೦: ಕರ್ನಾಟಕ ರಾಜ್ಯ ಬ್ರಾಹ್ಮಣ ಮಂಡಳಿಯ “ಸಾಂದೀಪನಿ ಶಿಷ್ಯ ವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯ ಭಾಗ-೧ ರಲ್ಲಿ ಪ್ರಥಮ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್ಗಳನ್ನು ವ್ಯಾಸಂಗ ಮಾಡುತ್ತಿರುವ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ನಿರ್ವಹಣಾ ವೆಚ್ಚ ರೂ.೧೫ ಸಾವಿರದಂತೆ ಶಿಷ್ಯವೇತನ ಪಾವತಿಸಲಾಗುವುದು. ಈ ಯೋಜನೆಯ ಭಾಗ-೨ ರಲ್ಲಿ ಸಿಇಟಿ, ನೀಟ್ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ ೨/೩ ಭಾಗದ ಮೊತ್ತವನ್ನು ಮರುಪಾವತಿ ಮಾಡಲಾಗುವುದು.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ (ಇಡಬ್ಲುö್ಯಎಸ್ ಪ್ರಮಾಣ ಪತ್ರ) ಹೊಂದಿರಬೇಕು. ವೃತ್ತಿಪರ ಕೋರ್ಸ್ಗಳಿಗೆ ಮ್ಯಾನೇಜ್ಮೆಂಟ್ ಕೋಟಾ ಅಥವಾ ಕಾಮೆಡ್-ಕೆ ರಡಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಅರ್ಹರಿರುವುದಿಲ್ಲ. ವಿದ್ಯಾರ್ಥಿಗಳ ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಎನ್‌ಪಿಸಿಐ ರಡಿ ಸೀಡ್ ಆಗಿರಬೇಕು.
ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ೨೦೨೬ ರ ಡಿಸೆಂಬರ್, ೩೧ ಕೊನೆಯ ದಿನವಾಗಿದೆ. ವೆಬ್‌ಸೈಟ್: ತಿತಿತಿ.ಞsbಜb.ಞಚಿಡಿಟಿಚಿಣಚಿಞಚಿ.gov.iಟಿ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: ೮೦೨೯೬೦೫೮೮೮ / ೮೭೬೨೨೪೯೨೩೦ ಗೆ ಬೆಳಗ್ಗೆ ೧೦ ಗಂಟೆಯಿAದ ಸಂಜೆ ೫.೩೦ ರವರೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ.