ವೀರಾಜಪೇಟೆ, ಆ. ೩೦: ಫೆಡರೇಷನ್ ಆಫ್ ಕೊಡವ ಸಮಾಜ ಬಾಳುಗೋಡು ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ ೬ ರಂದು ಕೈಲ್‌ಪೊಳ್ದ್ ನಮ್ಮೆಯನ್ನು ಬಾಳುಗೋಡಿನ ಕ್ರೀಡಾ ಸಮುಚ್ಚಯದಲ್ಲಿ ಆಯೋಜಿಸಲಾಗಿದೆ ಎಂದು ಕ್ರೀಡಾ ಸಮಿತಿ ಅಧ್ಯಕ್ಷ ತಂಬುಕುತ್ತಿರ ಮಧು ಮಂದಣ್ಣ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಲ್‌ಪೊಳ್ದ್ ನಮ್ಮೆ ಕೊಡವ ಜನಾಂಗದ ಸಾಂಪ್ರದಾಯಿಕ ಹಬ್ಬವಾಗಿದ್ದು, ಎಲ್ಲರೂ ಮುಕ್ತವಾಗಿ ಭಾಗವಹಿಸಬಹುದಾಗಿದೆ. ಪೂರ್ವಾಹ್ನ ೧೦ ಗಂಟೆಗೆ ಆಯುಧ ಪೂಜೆ ನಡೆಯಲಿದ್ದು, ಬಳಿಕ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗುವುದು ಎಂದರು.
ಕ್ರೀಡಾ ಸಂಚಾಲಕ ಕಂಬೀರAಡ ಕಿಟ್ಟು ಕಾಳಪ್ಪ ಮಾತನಾಡಿ, ಕೈಲ್‌ಪೊಳ್ದ್ ನಮ್ಮೆಯಲ್ಲಿ ಪುರುಷರು, ಮಹಿಳೆಯರು ಹಾಗೂ ಮಕ್ಕಳು ಸಮಾನವಾಗಿ ಭಾಗವಹಿಸಬಹುದು. ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಭಾರದ ಕಲ್ಲು ಎಸೆಯುವುದು, ತೆಂಗಿನಕಾಯಿಗೆ ಕಲ್ಲು ಎಸೆಯುವುದು ಸೇರಿದಂತೆ ವಿವಿಧ ಸಾಂಪ್ರದಾಯಿಕ ಹಾಗೂ ಒಳಾಂಗಣ ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಹೇಳಿದರು. ಕೊಡವ ಸಮಾಜಗಳ ಒಕ್ಕೂಟದ ವಾರ್ಷಿಕ ಕೊಡವ ನಮ್ಮೆಯನ್ನು ನವೆಂಬರ್ ೧೯ರಿಂದ ೨೨ರವರೆಗೆ ಆಯೋಜಿಸಲಾಗುವುದು. ಅಂತರ ಕೊಡವ ಸಮಾಜಗಳ ನಡುವೆ ಹಾಕಿ ಪಂದ್ಯಾಟ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಗುವುದು. ನವೆಂಬರ್ ೨೨ರಂದು ಹಾಕಿ ಪಂದ್ಯಾವಳಿಯ ಫೈನಲ್ ಹಾಗೂ ಸಾಂಸ್ಕೃತಿಕ ಪೈಪೋಟಿ ಕಾರ್ಯಕ್ರಮ ನಡೆಯಲಿದೆ ಎಂದು ಕಂಬೀರAಡ ಕಿಟ್ಟು ಕಾಳಪ್ಪ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕ್ರೀಡಾ ಸಮಿತಿ ಕಾರ್ಯದರ್ಶಿ ಕೋಟೆರ ರಘು ಕಾರ್ಯಪ್ಪ ಹಾಗೂ ನಿರ್ದೇಶಕ ಕುಂಜಿಲAಡ ದೊರೆ ಪೂಣಚ್ಚ ಉಪಸ್ಥಿತರಿದ್ದರು.