ಸೋಮವಾರಪೇಟೆ, ಆ. ೩೦: ಇಲ್ಲಿನ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೬-೨೭ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ತಾ. ೩೧ ರಂದು (ಇಂದು) ನಡೆಯಲಿದೆ.ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಶಾಸಕರು ಹಾಗೂ ಸಿಡಿಸಿ ಅಧ್ಯಕ್ಷ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಡಿ. ಹರ್ಷ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತç ಪ್ರಾಧ್ಯಾಪಕ ಡಾ. ತಿಪ್ಪೇಸ್ವಾಮಿ, ಹಳೇಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೋಮೇಶ್ ಉಪಸ್ಥಿತರಿರುವರೆಂದು ಸಂಯೋಜಕಿ ಸುನಿತಾ ತಿಳಿಸಿದ್ದಾರೆ.