ಚೆಟ್ಟಳ್ಳಿ, ಆ. ೩೧: ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವುದರಿಂದ ಕಾಫಿ, ಕರಿಮೆಣಸು, ಭತ್ತ ಸೇರಿದಂತೆ ವಿವಿಧ ಬೆಳೆಗಳ ಫಸಲಿನ ಮೇಲೆ ಗಂಭೀರ ಪರಿಣಾಮ ಬೀರುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕುಶಾಲನಗರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಒತ್ತಾಯಿಸಿದರು.
ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪರವಾಗಿ ಸರ್ಕಾರಕ್ಕೆ ಪತ್ರ ಬರೆದು ಕುಶಾಲನಗರ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಒತ್ತಾಯಿಸಲು ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು.
ಸಹಕಾರ ಸಂಘಗಳ ಆಡಳಿತ ವ್ಯವಸ್ಥೆಯನ್ನು ಗ್ರಾಮ ಪಂಚಾಯಿತಿಗಳ ಮಾದರಿಯಲ್ಲಿ ರೂಪಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ. ಹಿಂದಿನ ಸರ್ಕಾರಗಳು ರೈತರ ಕೃಷಿ ಸಾಲ ಮನ್ನಾ, ಬಡ್ಡಿ ಮನ್ನಾ ಹಾಗೂ ವಿವಿಧ ಪರಿಹಾರಗಳನ್ನು ಘೋಷಿಸುತ್ತಿದ್ದವು. ಆದರೆ ಪ್ರಸ್ತುತ ಸರ್ಕಾರ ರೈತರಿಗೆ ಯಾವುದೇ ಸಾಲಮನ್ನಾ ಅಥವಾ ಪರಿಹಾರ ಘೋಷಿಸದಿರುವುದು ಸರಿಯಲ್ಲ ಎಂದು ಅವರು ಹೇಳಿದರು.
ಆರ್ಟಿಸಿಯಲ್ಲಿ ಒಂದೇ ಕುಟುಂಬದ ಸದಸ್ಯರ ಜಂಟಿ ಹೆಸರುಗಳಿರುವುದರಿಂದ ರೈತರಿಗೆ ಕೃಷಿ ಸಾಲ ಪಡೆಯಲು ತೊಂದರೆಯಾಗುತ್ತಿದೆ. ಈ ಹಿಂದೆ ಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಸಾಲ ನೀಡುತ್ತಿದ್ದ ರೀತಿಯಲ್ಲೇ ಇಂತಹ ಸಮಸ್ಯೆಗಳಿಗೆ ಸರಳ ಪರಿಹಾರ ಕಂಡುಕೊAಡು ಕೃಷಿ ಸಾಲ ನೀಡುವ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಶ್ರೀ ನರೇಂದ್ರ ಮೋದಿ ರೈತ ಸಹಕಾರ ಭವನದ ಸಭಾಂಗಣದಲ್ಲಿ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಸಂಘದ ಆರ್ಥಿಕ ಸ್ಥಿತಿಗತಿ ಕುರಿತು ಮಾಹಿತಿ ನೀಡಲಾಯಿತು.
೧೯೭೬-೭೭ರಲ್ಲಿ ನೋಂದಣಿಗೊAಡು ಹಿರಿಯರು ಕಟ್ಟಿಬೆಳೆಸಿದ ಈ ಸಹಕಾರ ಸಂಘ ಮುಂದಿನ ವರ್ಷ ೫೦ನೇ ವರ್ಷಕ್ಕೆ ಕಾಲಿಡಲಿದೆ. ಈ ಹಿನ್ನೆಲೆಯಲ್ಲಿ ೫೦ನೇ ವರ್ಷಾಚರಣೆಯನ್ನು ವಿಶೇಷವಾಗಿ ಆಚರಿಸಿ, ಸಂಘದ ಎಲ್ಲ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಸAಘದ ಮುಖ್ಯ ಕಚೇರಿ ಹಾಗೂ ಈರಳೆ ಶಾಖೆಯ ಜಾಗಕ್ಕೆ ಸಂಬAಧಿಸಿದAತೆ ಸಂಘದ ಕೆಲವು ಸದಸ್ಯರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಪ್ರಕರಣ ವಿಚಾರಣೆಯಲ್ಲಿದೆ. ಸಂಘದ ಪರವಾಗಿ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ ಎಂದು ಮಣಿ ಉತ್ತಪ್ಪ ತಿಳಿಸಿದರು.
ಈರಳೆ ಶಾಖೆಯ ಗೋದಾಮು ಹಳೆಯದಾಗಿರುವ ಹಿನ್ನೆಲೆಯಲ್ಲಿ ಅದರ ದುರಸ್ತಿ ಕಾರ್ಯ ಕೈಗೊಳ್ಳಲು ಮಹಾಸಭೆಯ ಅನುಮತಿ ಪಡೆಯಲಾಗಿದೆ. ಸಂಘದಲ್ಲಿ ನೂತನ ತಂತ್ರಜ್ಞಾನ ವ್ಯವಸ್ಥೆ ಅಳವಡಿಸುವ ಉದ್ದೇಶದಿಂದ ಕಾಮನ್ ಸಾಫ್ಟ್ವೇರ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದು ಹೇಳಿದರು.
ಸಹಕಾರ ಸಂಘದ ಅಭಿವೃದ್ಧಿಗೆ ರೂ.೧ ಲಕ್ಷ ದೇಣಿಗೆ ನೀಡಿದ ನಿವೃತ್ತ ವಾಯುಪಡೆ ಯೋಧ ಪುತ್ತರಿರ ಗಣೇಶ್ ಭೀಮಯ್ಯ ಹಾಗೂ ಅವರ ಪತ್ನಿ ಪ್ರೇಮಾ ಭೀಮಯ್ಯ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಆಂತರಿಕ ಲೆಕ್ಕಪರಿಶೋಧಕ ಚಂದ್ರಶೇಖರ್ ಮಾತನಾಡಿ, ಒಂದು ಕಾಲದಲ್ಲಿ ರೂ.೪ ಲಕ್ಷ ಸಾಲದ ಸ್ಥಿತಿಯಲ್ಲಿದ್ದ ಸಹಕಾರ ಸಂಘ ಇಂದು ಅಭಿವೃದ್ಧಿಯತ್ತ ಸಾಗುತ್ತಿದ್ದು, ಉತ್ತಮ ಲಾಭಾಂಶ ಗಳಿಸುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಪ್ರತಿಭಾವಂತ ರೈತರ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್. ನಂದಿನಿ ಪ್ರಾರ್ಥಿಸಿದರು. ನಿರ್ದೇಶಕ ಅಕ್ಕಾರಿ ದಯಾನಂದ ವಂದಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಪೇರಿಯನ ಪೂಣಚ್ಚ, ನಿರ್ದೇಶಕರಾದ ಕೊಂಗೇಟಿರ ವಾಣಿಕಾಳಪ್ಪ, ಬಿ.ಎಂ. ಕಾಶಿ, ಪುತ್ತರಿರ ಶಿವು ನಂಜಪ್ಪ, ಮುಳ್ಳಂಡ ಮಾಯಮ್ಮ, ಅಕ್ಕಾರಿ ದಯಾನಂದ, ಬಟ್ಟೀರ ವೇಣುಗೋಪಾಲ, ಕರ್ಣಯ್ಯನ ಪ್ರಜ್ವಲ್, ಮರದಾಳು ಚೇತನ್, ಗಣೇಶ್ ಪಿ.ಟಿ., ರವಿ ಜೆ.ಆರ್., ಸಹಕಾರ ಸಂಘಗಳ ಮೇಲ್ವಿಚಾರಕಿ ಮಮತ ಎಂ.ಈ., ಪರಿಣತ ನಿರ್ದೇಶಕರಾದ ಚೋಳಪಂಡ ವಿಜಯ, ಮುಕ್ಕಾಟಿ ಪಳಂಗಪ್ಪ ಉಪಸ್ಥಿತರಿದ್ದರು.