ಕುಶಾಲನಗರ, ಆ. ೩೧; ಕುಶಾಲನಗರದ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಹೈಟೆಕ್ ಆಸ್ಪತ್ರೆಯನ್ನು ಹಾರಂಗಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.

ಅವರು ಪಟ್ಟಣದಲ್ಲಿ ದಿ.ಗುಂಡೂರಾವ್ ಕ್ರೀಡಾಂಗಣ ಸಮಿತಿ, ಚಾರಿಟೇಬಲ್ ಟ್ರಸ್ಟ್ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿ ಈ ಸಂಬAಧ ಸರ್ಕಾರದಿಂದ ಈಗಾಗಲೇ ೪೫ ಕೋಟಿ ರೂ ಅನುದಾನ ಬಿಡುಗಡೆಗೊಂಡಿದ್ದು ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದರು.

ಕ್ರೀಡೆಯ ಮೂಲಕ ಉತ್ತಮ ಬಾಂಧವ್ಯ ಹೊಂದಲು ಸಾಧ್ಯ ಎಂದ ಅವರು, ಆರೋಗ್ಯ ಕಾಪಾಡಲು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಮಾದಕ ವಸ್ತುಗಳ ದುಶ್ಚಟಗಳಿಂದ ಯುವಕರು ದೂರವಿರಬೇಕು, ಗುಂಡೂರಾವ್ ಬಡಾವಣೆ ಮೈದಾನದ ಜಾಗವನ್ನು ಗುಂಡೂರಾವ್ ಕ್ರೀಡಾಂಗಣ ಟ್ರಸ್ಟ್ ಸಮಿತಿ ಹೆಸರಿಗೆ ಆರ್‌ಟಿಸಿ ಮಾಡಿಕೊಡುವ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಜಾತ್ರೆ ಹಾಗೂ ಮತ್ತಿತರ ಚಟುವಟಿಕೆಗಳಿಗೆ ಅಡಚಣೆ ಆಗದಂತೆ ಪ್ರತ್ಯೇಕವಾಗಿ ಕ್ರೀಡಾ ಮೈದಾನಕ್ಕೆ ಜಾಗ ಒದಗಿಸುವ ಬಗ್ಗೆ ಭರವಸೆ ನೀಡಿದ ಅವರು ಕ್ರೀಡಾಂಗಣಕ್ಕೆ ಅಗತ್ಯವಿರುವ ಮೂಲಭೂತ ವ್ಯವಸ್ಥೆಯೊಂದಿಗೆ ಉತ್ತಮ ವೇದಿಕೆ ನಿರ್ಮಿಸಿಕೊಡಲು ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಸಂಘದ ನಿಯಮಗಳು ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗಿರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಶಾಸಕರು

ಜಾತ್ರಾ ಸಮಿತಿ ಹಾಗೂ ಕ್ರೀಡಾಂಗಣ ಸಮಿತಿಯ ಜಂಟಿ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಕುಶಾಲನಗರಕ್ಕೆ ಒಳಾಂಗಣ ಕ್ರೀಡಾಂಗಣ ಅಗತ್ಯವಾಗಿದ್ದು, ಪಟ್ಟಣದ ಹೊರವಲಯದಲ್ಲಿ ಸ್ಥಳ ಗುರುತಿಸಿ ಯೋಜನೆ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೊಳಿತ್ತಿರುವ ಕುಶಾಲನಗರ ವ್ಯಾಪ್ತಿಯಲ್ಲಿ ಕ್ರೀಡಾ ಸಮುಚ್ಛಯದ ಅಗತ್ಯತೆ ಇದೆ ಎಂದರಲ್ಲದೆ, ಕ್ರೀಡೆ, ಸಾಂಸ್ಕೃತಿಕ, ಕಲೆ,ಧಾರ್ಮಿಕ ಹಾಗೂ ಸೃಜನಶೀಲ ಚಟುವಟಿಕೆಗಳಿಗೆ ಸೂಕ್ತವಾದ ಸ್ಥಳ ಗುರುತಿಸಿ ಬೃಹತ್ ಕ್ರೀಡಾಂಗಣ ನಿರ್ಮಾಣ ಬಗ್ಗೆ ಶಾಸಕರ ಗಮನ ಸೆಳೆದರು.

ಸಮಿತಿ ಉಪಾಧ್ಯಕ್ಷ ಮಣಿ ಮಾತನಾಡಿ, ವೇಗವಾಗಿ ಬೆಳೆಯುತ್ತಿರುವ ಕುಶಾಲನಗರ ಪಟ್ಟಣದಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಹಾಗೂ ಕ್ರೀಡಾ ಪ್ರತಿಭೆಗಳನ್ನು ಬೆಳೆಸಲು ಸೂಕ್ತ ಮೈದಾನದ ಕೊರತೆ ಎದ್ದು ಕಾಣುತ್ತಿತ್ತು. ಶಾಲಾ ಕಾಲೇಜು ಮೈದಾನಗಳಲ್ಲಿ ಕ್ರೀಡಾ ಚಟುವಟಿಕೆ ನಡೆಸಲು ಕಷ್ಟ ಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಗುಂಡೂರಾವ್ ಬಡಾವಣೆಯಲ್ಲಿ ಸುಸಜ್ಜಿತವಾದ ಮೈದಾನ ಹಾಗೂ ಕಾರ್ಯಕ್ರಮಕ್ಕೆ ವೇದಿಕೆಯನ್ನು ಒದಗಿಸಿಕೊಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಸಮಿತಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಅಧ್ಯಕ್ಷತೆ ವಹಿಸಿ ಮಾತನಾಡಿದರು,

ಸಮಿತಿ ಗೌರವ ಅಧ್ಯಕ್ಷ ಪವನ್ ಗಣಪತಿ, ಫಯಾಜ್, ಪ್ರಧಾನ ಕಾರ್ಯದರ್ಶಿ ಆದಂ, ಸಂಘಟನಾ ಕಾರ್ಯದರ್ಶಿ ರಕ್ಷಿತ್ ಮಾವಜಿ, ಖಜಾಂಚಿ ಉತ್ತಪ್ಪ, ಸಂಚಾಲಕ ಮಹದೇವ ಮತ್ತು ಸಮಿತಿ ಸದಸ್ಯರು ಹಾಗೂ ಕಾನೂನು ಸಲಹೆಗಾರ ವಕೀಲ ಶಿವಮೂರ್ತಿ ಮತ್ತು ಸದಸ್ಯರುಗಳು ಪಾಲ್ಗೊಂಡಿದ್ದರು.

ಸಮಿತಿ ವತಿಯಿಂದ ಶಾಸಕ ಮಂತರ್ ಗೌಡ ಹಾಗೂ ಕಾನೂನು ಸಲಹೆಗಾರ ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.