ಮುಳ್ಳೂರು, ಆ. ೩೧: ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ೨೦೨೬-೨೭ನೇ ಸಾಲಿನ ಶನಿವಾರಸಂತೆ ವಲಯ ಮಟ್ಟದ ಕ್ರೀಡಾಕೂಟ ತಾ. ೧ ರಂದು (ಇಂದು) ಮತ್ತು ೪ ರಂದು ಗೋಪಾಲಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ ೯.೩೦ ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.