ಪೊನ್ನಂಪೇಟೆ, ಸೆ. ೧: ಬಡತನ ಮತ್ತು ಹಸಿವಿನ ಮಹತ್ವ ವಿದ್ಯಾರ್ಥಿಗಳು ಚಿಕ್ಕಂದಿನಿAದಲೇ ತಿಳಿಯುವಂತಾಗಬೇಕು. ಜೊತೆಗೆ ಅನ್ನದ ಬೆಲೆಯನ್ನು (ಮೌಲ್ಯವನ್ನು) ಅರಿತಿರಬೇಕು ಎಂದು ವೀರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪೂಜಾ ಸಜೇಶ್ ಹೇಳಿದರು.

ವೀರಾಜಪೇಟೆಯ ಆರ್ಜಿಯಲ್ಲಿರುವ ಅನ್ವಾರುಲ್ ಹುದಾ ಶಿಕ್ಷಣ ಸಂಸ್ಥೆಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವತಿಯಿಂದ ಈದ್ ಮಿಲಾದ್ ಅಂಗವಾಗಿ ಆಹಾರ ಸಾಮಗ್ರಿ ಮತ್ತು ಕ್ರೀಡಾ ಪರಿಕರಗಳನ್ನು ವಿತರಿಸಿದ ನಂತರ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹಸಿವಿಗೆ ಯಾವುದೇ ಜಾತಿ-ಮತಗಳ ಭೇದವಿಲ್ಲ. ಹೊಟ್ಟೆ ಹಸಿದಾಗ ಹಸಿವಿನ ನೋವು ಎಲ್ಲರಿಗೂ ಒಂದೇ ಆಗಿರುತ್ತದೆ. ಆದ್ದರಿಂದ ಬಡತನವನ್ನು ಯಾವುದೇ ಮಾನದಂಡಗಳಿAದ ಅಳೆಯಬಾರದು ಮಾತ್ರವಲ್ಲದೆ, ಬಡತನವನ್ನು ಕೀಳರಿಮೆಯಿಂದ ಕಾಣಬಾರದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅನ್ವಾರುಲ್ ಹುದಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಮುಖರಾದ ಅಬೂಬಕ್ಕರ್ ಹಾಜಿ, ಪ್ರಾಂಶುಪಾಲರಾದ ಇಲ್ಯಾಸ್, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಆಡಳಿತಾಧಿಕಾರಿ ರಕ್ಷಿತಾ, ಶಿಕ್ಷಕಿಯಾದ ಕೃತಾ, ಲೀನಾ, ಸಿಬ್ಬಂದಿಗಳಾದ ಎಂ.ಎ. ಮುನ್ನಾ, ರಫೀಕ್ ಮೊದಲಾದವರು ಉಪಸ್ಥಿತರಿದ್ದರು.