ಕೂಡಿಗೆ, ಸೆ. ೧: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆಯು ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನೆಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್, ವಿದ್ಯಾರ್ಥಿಗಳಿಗೆ ಘಟಕ ಪರೀಕ್ಷೆಗಳು ನಡೆಯುತ್ತಿವೆ. ಅದಲ್ಲದೆ ಪ್ರಥಮ ಕಿರು ಪರೀಕ್ಷೆ ನಡೆದಿದೆ. ಈ ಪರೀಕ್ಷೆಗಳಲ್ಲಿ ತಮ್ಮ ಮಕ್ಕಳು ಎಷ್ಟು ಅಂಕಗಳನ್ನು ಪಡೆದಿದ್ದಾರೆ ಎಂಬುದನ್ನು ಖಾತ್ರಿಪಡಿಸಿಕೊಂಡು ಕಡಿಮೆ ಅಂಕ ಪಡೆದ ಮಕ್ಕಳಿಗೆ ಮಾರ್ಗದರ್ಶನ ನೀಡಿ ಅವರು ಮುಂದಿನ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ತರುವಲ್ಲಿ ಪ್ರಯತ್ನ ಮಾಡಬೇಕು ಎಂದರು.
ಹಿರಿಯ ಉಪನ್ಯಾಸಕರಾದ ನಾಗಪ್ಪ ಯಾಲಕ್ಕಿ ಕಟ್ಟೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಮೂಡಿ ಬಂದರೆ ಕಲಿಕೆಗೆ ಅನುಕೂಲವಾಗುತ್ತದೆ. ನಮ್ಮ ಕಾಲೇಜು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಪೋಷಕರು ಮಕ್ಕಳಿಗೆ ಮನೆಯಲ್ಲಿ ಕಲಿಯಲು ಪೂರಕ ವಾತಾವರಣವನ್ನು ನಿರ್ಮಿಸಬೇಕು ಎಂದರು.
ಸಭೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಚ್.ಕೆ ಸೋಮಶೇಖರ್, ಕನ್ನಡ ಉಪನ್ಯಾಸಕ ರವೀಶ್, ಕಾಲೇಜು ಉಪನ್ಯಾಸಕರ ವೃಂದ, ಪೋಷಕರು ಪಾಲ್ಗೊಂಡಿದ್ದರು..